
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದ ಗ್ರಾಮ ಪಂಚಾಯತ ಸದಸ್ಯೆ ಶ್ರೀಮತಿ ತಿರುಮಲಾ ವಿಲಾಸ ಕಾಂಬಳೆ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಭಾರತದ ಸಂವಿಧಾನ ಪೀಠಿಕೆಯನ್ನು ಅಕ್ಕಿ ಕಾಳಿನಿಂದ ಬರೆದು ಹೆಮ್ಮೆ ವ್ಯಕ್ತ ಪಡಿಸಿದ್ದಾರೆ.
ಭಾರತೀಯ ಸಂವಿಧಾನವು ಜಾತ್ಯತೀತ, ಸಮಾಜವಾದಿ ಮತ್ತು ಪ್ರಜಾಸತ್ತಾತ್ಮಕ ತತ್ವಗಳನ್ನು ಆಧರಿಸಿದ್ದು ಇದು ಎಲ್ಲರಿಗೂ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯವನ್ನು ದೋರಕಿಸಿ ಕೊಟ್ಟಿದೆ ಸಂವಿಧಾನದ ಅಡಿಯಲ್ಲಿ ಸರ್ಕಾರವು ಜನರ ಇಚ್ಛೆಯಂತೆ ಆಳ್ವಿಕೆ ನಡೆಸಬೇಕು ಮತ್ತು
ಸಂವಿಧಾನದ ಆಶಯಗಳನ್ನು ಅರ್ಥಮಾಡಿಕೊಂಡು, ಅದರಂತೆ ನಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಮ್ಮ ಸಂವಿಧಾನವು ನಮಗೆ ನೀಡಿರುವ ಹಕ್ಕುಗಳನ್ನು ಚಲಾಯಿಸುವುದರ ಜೊತೆಗೆ, ನಮ್ಮ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಬೇಕಾಗಿದೆ ಅದರಂತೆ ಈ ಅಕ್ಕಿ ಕಾಳಿನಲ್ಲಿ ಭಾರತೀಯ ಸಂವಿಧಾನದ ಪೀಠಿಕೆಯನ್ನು ಬರೆದಿದ್ದೆನೆ ಎಂದು ಗ್ರಾಮ ಪಂಚಾಯತಿ ಸದಸ್ಯ ತಿರುಮಲಾ ಕಾಂಬಳೆ ಹೇಳಿದ್ದಾರೆ.
