ಚಿತ್ರದುರ್ಗದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಸ್ಥಾಪನೆಗೆ ಭೂಮಿಪೂಜೆ
ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯ ಪಟ್ಟtದ ಹೃದಯ ಭಾಗದ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿಯವರ ಪುತ್ಥಳಿಯ ನಿರ್ಮಾಣಕ್ಕಾಗಿ ಹಟ್ಟಿಮಲ್ಲಪ್ಪ ನಾಯಕ ಸಂಘದ ಪದಾಧಿಕಾರಿಗಳು ಭೂಮಿಪೂಜೆ ನೆರವೇರಿಸಿದರು. ಪುತ್ಥಳಿ ನಿರ್ಮಾಣಕ್ಕೆ ಅಗತ್ಯವಾಗಿರುವ ಅನುದಾನವನ್ನು ಹೋಬಳಿಯಾದ್ಯಂತ ಸುಮಾರು 40ಕ್ಕೂ ಹೆಚ್ಚು ಹಳ್ಳಿಗಳಲ್ಲಿರುವ ವಾಲ್ಮೀಕಿ ನಾಯಕ ಸಮುದಾಯದ ಪ್ರತೀ ಮನೆಯಿಂದಲೂ ದೇಣಿಗೆಯನ್ನು ಸಂಗ್ರಹಿಸಲಾಗಿದೆ. ಅಕ್ಟೋಬರ್ 7ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿಯಂದು ನೂತನ ವಾಲ್ಮೀಕಿಯವರ ಶಿಲಾ ಪುತ್ಥಳಿ ಪ್ರತಿಷ್ಠಾಪನೆ ಮಾಡಬೇಕು ಎಂದು ಹಟ್ಟಿಮಲ್ಲಪ್ಪನಾಯಕ ಸಂಘವು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ . ಇದೇ ವೇಳೆ ಹಟ್ಟಿಮಲ್ಲಪ್ಪನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿಯವರು ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿಯವರ ಶಿಲಾ ಪುತ್ಥಳಿ ನಿರ್ಮಾಣ ಮಾಡಬೇಕೆಂಬುದು ಹಲವು ವರ್ಷಗಳ ಕನಸಾಗಿತ್ತು. ಹಟ್ಟಿಮಲ್ಲಪ್ಪ ನಾಯಕ ಸಂಘವು ಪುತ್ಥಳಿ ನಿರ್ಮಾಣಕ್ಕೆ ಅಗತ್ಯವಾಗಿರುವ ಎಲ್ಲ ನಿಯಮಗಳನ್ನು ಕೈಗೊಂಡಿದ್ದೇವೆÉ ಎಂದು ಸಂಘದ ಪದಾಧಿಕಾರಿಗಳು ಹೇಳಿದರು.
