ಶ್ರೀ ಕ್ಷೇತ್ರ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಪರ ಚಿತ್ರದುರ್ಗದಲ್ಲಿ ಮೌನ ಪ್ರತಿಭಟನೆ
ಚಿತ್ರದುರ್ಗದ ಧರ್ಮಸ್ಥಳ ಭಕ್ತ ಅಭಿಮಾನಿಗಳ ವೇಧಿಕೆ ವತಿಯಿಂದ ನಗರದ ನೀಲಕಂಠೇಶ್ವರ ದೇವಸ್ಥಾನದದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅವಹೇಳನಕಾರಿ ಮಾತು ಗಳನ್ನಾಡುತ್ತಿರುವುದಲ್ಲದೆ,ಕೋಟ್ಯಂತರ ಭಕ್ತರ ಭಾವನೆಗಳಿಗೆ ದಕ್ಕೆ ತರುವಂತಹ ಕೆಲಸ ಮಾಡುತ್ತಿದ್ದೀರಾ, ಎಂದು ಸಾಮಾಜಿಕ ಜಾಲಾ ತಾಣದಲ್ಲಿ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಮಾತನಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನೂರಾರು ಸಂಖ್ಯೆಯಲ್ಲಿ ಭಕ್ತರನ್ನೊಳಗೊಂಡು ಪ್ರತಿಭಟನೆ ಮಾಡಿದರು.
