ಟಾಪ್ 10 ರಲ್ಲಿ ಭಾರತದ ನಾಲ್ವರು; ಗಿಲ್ಗೆ ಅಗ್ರಸ್ಥಾನ, ಜಾರಿದ ಬಾಬರ್ ಆಝಂ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ನಂತರ ಬಿಡುಗಡೆಯಾದ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಬಾಬರ್ ಆಝಂ ಅವರ ಕಳಪೆ ಪ್ರದರ್ಶನದಿಂದ ಅವರು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ರೋಹಿತ್ ಶರ್ಮಾ ಎರಡನೇ ಸ್ಥಾನ, ಅಗ್ರಸ್ಥಾನದಲ್ಲಿ ಶುಭ್ಮನ್ ಗಿಲ್ ಇದ್ದಾರೆ. ಭಾರತದ ನಾಲ್ವರು ಆಟಗಾರರು ಟಾಪ್ 10 ರಲ್ಲಿ ಸ್ಥಾನ ಪಡೆದಿದ್ದಾರೆ.
ವೆಸ್ಟ್ ಇಂಡೀಸ್ – ಪಾಕಿಸ್ತಾನ ನಡುವಿನ ಏಕದಿನ ಸರಣಿಯ ನಂತರ ಬಿಡುಗಡೆಯಾಗಿರುವ ಐಸಿಸಿ ನೂತನ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಇತ್ತೀಚೆಗೆ ಮುಕ್ತಾಯಗೊಂಡ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಕಿಸ್ತಾನದ ಅನುಭವಿ ಬ್ಯಾಟ್ಸ್ಮನ್ ಬಾಬರ್ ಆಝಂ ಅವರ ಪ್ರದರ್ಶನವು ತುಂಬಾ ಕಳಪೆಯಾಗಿತ್ತು.ಭಾರತ ಟೆಸ್ಟ್ ತಂಡದ ನಾಯಕ ಶುಭ್ಮನ್ ಗಿಲ್, ಏಕದಿನ ರ್ಯಾಂಕಿಂಗ್ನಲ್ಲಿ 784 ರೇಟಿಂಗ್ನೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ನಾಯಕ ರೋಹಿತ್ ಶರ್ಮಾ 756 ರೇಟಿಂಗ್ನೊಂದಿಗೆ ಇದೀಗ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
