ದರ್ಶನ್ ಜಾಮೀನು ರದ್ದು: ರಮ್ಯಾ ಪೋಸ್ಟ್ ಭಾರಿ ವೈರಲ್
BANGALORE:ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಬಿಗ್ ಶಾಕ್ ಸುಪ್ರೀಂ ಕೋರ್ಟ್ ನೀಡಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ . ಇದರ ಬಗ್ಗೆ ನಟಿ ರಮ್ಯಾ ಟ್ವೀಟ್ ಮಾಡಿದ್ದಾರೆ.
ನಟ ದರ್ಶನ್ ಮತ್ತು ಇತರರಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಸಂದೇಶವನ್ನು ಇದು ಸಾರುತ್ತದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇಡಿ, ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ ಎಂದು ನಟಿ ರಮ್ಯ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ರಮ್ಯ ಪೋಸ್ಟ್ನಲ್ಲಿ ಏನಿದೆ?
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಇತರೆ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸುವ ಮೂಲಕ ಕಾನೂನು ಮುಂದೆ ಎಲ್ಲರೂ ಸಮಾನರು ಎಂಬ ಬಲವಾದ ಸಂದೇಶ ರವಾನಿಸಿದೆ. ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇಡಿ ಮತ್ತು ಆದನ್ನು ಅನುಸರಿಸಿ. ಇದು ದೀರ್ಘ ಮತ್ತು ಕಠಿಣ ಆದರೆ ಸುರಂಗದ ಕೊನೆಯಲ್ಲಿ ಬೆಳಕು ಇದೆ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯ ಸಿಗಲಿದೆ ಎಂದು ಎಂದು ಇತರರಿಗೆ ನಾನು ಹೇಳಲು ಬಯಸುತ್ತೇನೆ.
