79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಜಯಪುರದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ
ವಿಜಯಪುರ: 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಜಯಪುರದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಡಾ.ಎಂ. ಬಿ. ಪಾಟೀಲ್ ರವರು ಧ್ವಜಾರೋಹಣ ಮಾಡಿದರು. ಕ್ರೀಡಾಂಗಣದಲ್ಲಿ ಪರೇಡ್ ತಂಡಗಳು, ಸಾರ್ವಜನಿಕರಿಂದ ಗೌರವ ವಂದನೆ ಸ್ವೀಕರಿಸಿದ ಸಚಿವರು. ಸ್ಕೌಟ್ ಅಂಡ್ ಗೈಡ್ಸ್, ಭಾರತ್ ಸೇವಾ ದಳ, ಪೊಲೀಸ್, ವಿದ್ಯಾರ್ಥಿಗಳ ತಂಡಗಳಿಂದ ಆಕರ್ಷಕ ಪರೇಡ್ ಮತ್ತು ವಿವಿಧ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ಮೂಲಕ ಕಣ್ಮನ ಸೆಳೆದರು. ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರಿಗೆ ಸನ್ಮಾನ ವನ್ನು ಏರ್ಪದಿಸಿದ್ದು, ಸಂಸದರು ಶ್ರೀ ರಮೇಶ್ ಜಿಗಜಿಣಗಿ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ ಎಂಎಲ್ಸಿ ರವಿಕುಮಾರ್, ಜಿಲ್ಲಾ ಅಧಿಕಾರಿ ಡಾ ಆನಂದ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಖಾಧಿಕಾರಿ ಶ್ರೀ ರಿಷಿ ಕುಮಾರ್ ಹಾಗೂ ಪೊಲೀಸ್ ವರಿಷ್ಟಾಧಿಕಾರಿ ಶ್ರೀ ನಿಂಬರಗಿ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.
