ಟ್ರ್ಯಾಕ್ಟರ್-ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ : ಮರಳು ತುಂಬಿದ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ ನಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಹುಲ್ಲೂರ ಹಾಗೂ ಅಮರಾಪುರ ಗ್ರಾಮದ ಬಳಿ ನಡೆದಿದೆ. ಬೈಕ್ ಸವಾರನನ್ನು ಮಹ್ಮದ್ ರಫಿ ಹುಸೇನಸಾಬ್ ನದಾಫ ಎಂದು ಗುರುತಿಸಲಾಗಿದೆ. ಈತ ಹುಲ್ಲೂರ ಗ್ರಾಮ ಸಹಾಯಕನಾಗಿದ್ದ ಎನ್ನಲಾಗ್ತಿದೆ. ಇನ್ನು ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
