ನಗರದ ಹೊರವಲಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಯುವತಿ ಪತ್ತೆ
ಚಿತ್ರದುರ್ಗ : ಚಿತ್ರದುರ್ಗನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಅರೆ ಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಯುವತಿ ಶವ. ಚಿತ್ರದುರ್ಗ ಗ್ರಾಮಾಂತರ ಠಾಣಾ ಪೊಲೀಸ್ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಗೋನೂರು ಬ್ರಿಡ್ಜ್ ಬಳಿ ಕೊಲೆ ಮಾಡಿ ಶವವನ್ನು ಸುಟ್ಟು ಹಾಕಿದ ದುಷ್ಕರ್ಮಿ. ದ್ವಿತೀಯ ಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ. ಮೃತ ಯುವತಿ ಅಂದಾಜು 25 ವರ್ಷ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿನಿ ಪರವಾಗಿ ವಿದ್ಯಾರ್ಥಿಗಳು ಕಾಲೇಜ್ ಬಂದು ಮಾಡಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಮೃತ ಯುವತಿಯ ಗುರುತು ಇದೂವರೆಗೂ ಪತ್ತೆಯಾಗಿಲ್ಲ, ಸದ್ಯ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೆಟಿ ನೀಡಿ , ಡಿವೈಎಸ್ಪಿ ದಿನಕರ್ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
