ಗೊಂದಲಮಯ ವಾತಾವರಣ ಸೃಷ್ಠಿಸಿದ ಪುನೀತ್ ಕೆರೇಹಳ್ಳಿ ಬಂಧನ

ಕುಶಾಲನಗರ : ಪ್ರತಿಭಟನಾಕಾರರನ್ನು ಉದ್ದೇಶಿಸಿ ಶ್ರೀ ಬಸವಲಿಂಗ ಸಿದ್ದಲಿಂಗ ಸ್ವಾಮೀಜಿ ಮಾತನಾಡುತ್ತಿದ್ದ ವೇಳೆ ದಿಢೀರ್ ಪ್ರತ್ಯಕ್ಷಗೊಂಡ ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೆಹಳ್ಳಿ ಯಿಂದ ಗೊಂದಲಮಯ ವಾತಾವರಣ ನಿರ್ಮಾಣವಾಯಿತು.ವೇದಿಕೆ ಮೇಲೆ ಪುನೀತ್ ಕೆರೆಹಳ್ಳಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಜೈ ಶ್ರೀರಾಂ ಎಂಬ ಘೋಷಣೆ ಹೇಳುತ್ತಿದ್ದಂತೆ ನೆರೆದಿದ್ದ ಪ್ರತಿಭಟನಾಕಾರರು ಅವರ ಮೇಲೆ ಮುಗಿಬೀಳುತ್ತಿದ್ದಂತೆ ಪೊಲೀಸರು ಅವರನ್ನು ವೇದಿಕೆಯಿಂದ ಕೆಳಗಿಳಿಸಲು ಮುನ್ನುಗಿದರು.ಇದರಿಂದ ಪೊಲೀಸ್ ಮತ್ತು ಪ್ರತಿಬಟನಾಕಾರರಿಂದ ನೂಕು ನುಗ್ಗಲಾಟ ಏರ್ಪಟ್ಟು ಪೊಲೀಸರು ಕೆರೆಹಳ್ಳಿರವರನ್ನು ಬಂಧಿಸಿ ಕರೆದೊಯ್ಯುವಂತಹ ಸಂದರ್ಭದಲ್ಲಿ ಪೊಲೀಸ್-ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಅನುಮತಿ ಪಡೆಯದೆ ಪುನೀತ್ ಪ್ರತಿಭಟನೆಯಲ್ಲಿ ಭಾಗಿಯಾಗಿರುವುದು ಅಲ್ಲದೆ ಬಹಿರಂಗ ಸಭೆಯಲ್ಲಿ ಮಾತನಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿ ಪೊಲೀಸರು ಬಲವಂತವಾಗಿ ಕೆರೆಹಳ್ಳಿಯನ್ನು ಕರೆದುಕೊಂಡು ಹೋದರು.ಕೊಡಗಿನ ಗಡಿಯಾಚೆ ಬೈಲುಕೊಪ್ಪ ಪೊಲೀಸ್ ಠಾಣೆಗೆ ಕೆರೆಹಳ್ಳಿಯನ್ನು ಹಸ್ತಾಂತರಿಸಿದ ಪೊಲೀಸ್ ಮುಂದಿನ ಕ್ರಮ ಕೈಗೊಂಡರು
