ಲಕ಼್ಮೇಶ್ವರ ಪಟ್ಟಣದಲ್ಲಿ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಹಿಂದೂ ಧರ್ಮ ಸಂರಕ್ಷಣಾ ಜಾಥಾ

ಗದಗ : ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಕನ್ನಡ ಪರ ಮತ್ತು ಹಿಂದೂ ಪರ ಸಂಘಟನೆಗಳ ನೇತೃತ್ವದಲ್ಲಿ ಹಿಂದೂ ಧರ್ಮ ಸಂರಕ್ಷಣಾ ಜಾಥಾ ಆಯೋಜಿಸಲಾಗಿತ್ತು,ಪಟ್ಟಣದ ಹಾವಳಿ ಹನಮಂತ ದೇವಸ್ಥಾನದ ಆವರಣದಿಂದ ಬಜಾರ್ ರಸ್ತೆಯ ಮುಖಾಂತರ ಬಸ್ ನಿಲ್ದಾಣದವರೆಗೆ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಕೋಟ್ಯಾಂತರ ಹಿಂದೂಗಳ ಪವಿತ್ರ ಸ್ಥಳವಾಗಿದ್ದು, ಭಕ್ತರ ನಂಬಿಕೆ ಭಾವನೆಗಳಿಗೆ ಧಕ್ಕೆಯನ್ನು ತರುವ ಮೂಲಕ ಧರ್ಮಸ್ಥಳದ ಪಾವಿತ್ರ್ಯತೆಯನ್ನು ನಾಶ ಮಾಡಲು ಹೊರಟಿರುವ ಮತಾಂಧ ಶಕ್ತಿಗಳ ವಿರುದ್ಧ ರಾಜ್ಯ ಸರ್ಕಾರ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಅಲ್ಲದೆ ಹಿಂದೂಗಳ ಧಾರ್ಮಿಕ ಹಾಗೂ ಪವಿತ್ರ ಕ್ಷೇತ್ರವಾಗಿರುವ ಶ್ರೀ ಧರ್ಮಸ್ಥಳದ ಬಗ್ಗೆ ಇಲ್ಲ-ಸಲ್ಲದ ಸುಳ್ಳು ಅಪಪ್ರಚಾರದ ಹಿಂದೆ ಹಲವರ ಕೈವಾಡವಿದೆ ಎಂದು ಆರೋಪಿಸಿದರು. ಹೂವಿನ ಶಿಗ್ಲಿ ವಿರಕ್ತಮಠದ ಚೆನ್ನವೀರ ಮಹಾಸ್ವಾಮಿಗಳು, ಬೆಳ್ಳಟ್ಟಿಯ ರಾಮಲಿಂಗೇಶ್ವರ ಮಠದ ಬಸವರಾಜ ಮಹಾಸ್ವಾಮಿಗಳು, ಗಂಜಿಗಟ್ಟಿ ವೈಜನಾಥ ಶಿವಲಿಂಗ ಶಿವಾಚಾರ್ಯರು, ಕುಮಾರ ಮಹಾರಾಜರು ಹಿಂದೂ ಸಮಾಜದ ಮುಖಂಡರು, ಹಿಂದೂ ಜನಜಾಗೃತಿ ಸಮಿತಿ ಹಾಗೂ ಅರಳು ವಿಶೇಷ ಚೇತನ ಶಾಲಾ ಮಕ್ಕಳು ಸೇರಿದಂತೆ ವಿವಿಧ ಸಂಘಟನೆಯವರು ಜಾಥಾದಲ್ಲಿ ಭಾಗಿಯಾಗಿದ್ದರು.
