ಉಗ್ರರ ಒಳನುಸುಳುವಿಕೆ ಪ್ರಯತ್ನ ಭಾರತೀಯ ಸೇನೆ-ಜಮ್ಮು ಪೊಲೀಸರಿಂದ ಜಂಟಿ ಕಾರ್ಯಾಚರಣೆ
ಬಂಡಿಪೋರಾ: ಉಗ್ರರ ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಜಮ್ಮು -ಕಾಶ್ಮೀರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜಮ್ಮು- ಕಾಶ್ಮೀರ ಪೊಲೀಸರು ಗುರೆಜ್ ಸೆಕ್ಟರ್ನಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್ನಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಉಗ್ರಗಾಮಿಗಳ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಇಬ್ಬರನ್ನು ಇಂದು ನಸುಕಿನ ಜಾವ ಹತ್ಯೆ ಮಾಡಿವೆ.ಉಗ್ರರ ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಜಮ್ಮು -ಕಾಶ್ಮೀರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜಮ್ಮು- ಕಾಶ್ಮೀರ ಪೊಲೀಸರು ಗುರೆಜ್ ಸೆಕ್ಟರ್ನಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ಸೇನೆಯ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ತಿಳಿಸಿದೆ. ಎಲ್ಒಸಿ ಬಳಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ ಭದ್ರತಾ ಪಡೆಗಳು ಒಳನುಸುಳುವವರನ್ನು ಗಮನಿಸಿದಾಗ ಅವರು ಮನಬಂದಂತೆ ಗುಂಡು ಹಾರಿಸುವ ಮೂಲಕ ಪ್ರತಿಕ್ರಿಯೆ ನೀಡಲಾರಂಭಿಸಿದರು. ಭದ್ರತಾ ಪಡೆಗಳು ಪರಿಣಾಮಕಾರಿಯಾಗಿ ಪ್ರತಿದಾಳಿ ನಡೆಸಿ, ಇಬ್ಬರು ಭಯೋತ್ಪಾದಕರನ್ನು ತಟಸ್ಥಗೊಳಿಸಿದವು. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.
