ಬೆಂಗಳೂರಿನ ಹಲಸೂರು ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರು: ಇತತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಇ-ಮೇಲ್ ಹುಸಿ ಬಾಂಬ್ ಬೆದರಿಕೆಗಳಿಂದಾಗಿ ಸಾರ್ವಜನಿಕರು ಭಯದಿಂಧ ಜೀವನ ನಡೆಸುವಂತಹ ಪರಿಸ್ಥಿತಿ ಎದುರಾಗಿದೆ . ದಿನ ಬೆಳಗಾದರೆ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಸುದ್ದಿಗಳನ್ನು ನೋಡುತ್ತಿದ್ದೇವೆ. ಇದರ ನಡುವೆ ಬೆಂಗಳೂರಿಗೆ ಬೆದರಿಕೆ ಬಾಂಬ್ ಪ್ರಕರಣ ಹೆಚ್ಚುತ್ತಿದೆ.
ಬೆಂಗಳೂರು ನಗರದಲ್ಲಿ ಬಾಂಬ್ ಬೆದರಿಕೆ ಹಾವಳಿ ಇನ್ನು ನಿಂತಿಲ್ಲ. ಕೆಲವು ದಿನಗಳ ಹಿಂದಷ್ಟೇ ಬೆಂಗಳೂರು ಸಿವಿಲ್ ಕೋರ್ಟ್ ಮತ್ತು ಹೈಕೋರ್ಟಿಗೆ . ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಇದೀಗ ಬೆಂಗಳೂರಿನ ಗುರುದ್ವಾರವೊಂದಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಹಲಸೂರು ಕೆರೆ ಸಮೀಪ ಇರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ನಾಲ್ಕು ದಿನಗಳ ಹಿಂದೆ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಬಂದಿದ್ದು, ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ಕು ಆರ್ಡಿಎಕ್ಸ್ ಸ್ಫೋಟಿಸುವುದಾಗಿ ರಾಜ ಗಿರಿ ಎಂಬಾತನ ಹೆಸರಿನಲ್ಲಿ ಕಳುಹಿಸಲಾದ ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು. ಸಿಖ್ ಗುರುದ್ವಾರದ ಶೌಚಾಲಯದಲ್ಲಿ ಬಾಂಬ್ ಇಟ್ಟಿದ್ದಾಗಿ ಸಂದೇಶದಲ್ಲಿ ತಿಳಿಸಲಾಗಿತ್ತು. ಋಷಿಪಾಲ್ ಸಿಂಗ್ ಎಂಬವರು ನೀಡಿದ ದೂರು ಆಧರಿಸಿ ಕೇಸ್ ದಾಖಲಿಸಿದ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
