ಬಾಗಲಕೋಟೆ: ಅಕ್ರಮವಾಗಿ ಗೋ ಮಾಂಸ ಸಾಗಿಸುತ್ತಿದ್ದ ವಾಹನ ವನ್ನು ಹಿಂದೂ ಸಂಘಟನೆ ಕಾರ್ಯಕರ್ತರು ತಡೆದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸಿನಗ ಕ್ರಾಸ್ ಬಳಿ ಮಂಗಳವಾರ ರಾತ್ರಿ ನಡೆದಿದೆ. ವಾಹನ ಚಾಲಕ ಹಸನಸಾಬ್ ಜಂಬಗಿ ಎಂಬಾತ ವಿಜಯಪುರದಿಂದ ಹುಬ್ಬಳ್ಳಿ ಕಡೆಗೆ ಎರಡು ಟನ್ ನಷ್ಟು ಗೋಮಾಂಸ ಮತ್ತು ಗೋಮೂಳೆ ಇರಿಸಿಕೊಂಡು ಕೆಎ ೨೮, ಸಿ ೭೪೧೮ ನಂಬರ್ ನ ವಾಹನದಲ್ಲಿ ಸಾಗಾಟ ಮಾಡುತ್ತಿದ್ದನು. ಖಚಿತ ಮಾಹಿತಿಯ ಆಧಾರದ ಮೇಲೆ ಹಿಂದೂ ಕಾರ್ಯಕರ್ತರು ಸ್ಥಳಕ್ಕೆ ಬಂದು ಚಾಲಕ ಹಾಗೂ ವಾಹನ ತಡೆದು,ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಚಾಲಕ ಮತ್ತು ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
