ವಿಜಯಪುರ:ವಿಜಯಪುರದ ಭೀಮಾತೀರದ ಎಸ್ಬಿಐ ಬ್ಯಾಂಕಿನಲ್ಲಿ ದರೋಡೆ ಮಾಡಿರುವುದು ಬೆಳಕಿಗೆ ಬಂದಿದೆ.ಮನಗೂಳಿ ಕೇಂದ್ರ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವೆ ಮುನ್ನವೇ ಮತ್ತೊಂದು ಬ್ಯಾಂಕಿನಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ.ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಎಸ್ ಬಿ ಐ ಬ್ಯಾಂಕಿನಲ್ಲಿ ಕಳ್ಳತನ ನಡೆದಿದೆ. ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಅವರನ್ನು ಕಟ್ಟಿ ಹಾಕಿ ಕಳ್ಳರು ಕಳ್ಳತನ ಮಾಡಿದ್ದಾರೆ. ಇನ್ನು ಬ್ಯಾಂಕು ವಹಿವಾಟು ಸಮಯ ಮುಗಿದ ನಂತರ ಬ್ಯಾಂಕಿಗೆ ಮೂರು ಮಂದಿ ಮುಸುಕುಧಾರಿಗಳು ನುಗ್ಗಿ ಕೃತ್ಯವನ್ನು ಎಸಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಹಾಗೂ ಬ್ಯಾಂಕಿನಲ್ಲಿ ಎಷ್ಟು ಹಣ ಕಳ್ಳತನವಾಗಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿಸಿದ್ದಾರೆ. ಪ್ರಕರಣ ಚಡಚಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.
