ಬೆಂಗಳೂರು: ಹೌದು, ಬೆಂಗಳೂರಿನಲ್ಲಿ ದಿನದಿಂದ ದಿಕ್ಕೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಈ ಕಾರಣದಿಂದ ಬೆಂಗಳೂರು ನಗರದ ಪೊಲೀಸರು ರೌಡಿಗಳ ಮೇಲೆ ನಿಗಾ ವಹಿಸಲು ಮುಂದಾಗುತ್ತಿದ್ದಾರೆ. ಬೆಂಗಳೂರಿನಾದ್ಯಂದ ಇರುವ ರೌಡಿಶೀಟರ್ಗಳ ಮನೆ ಮೇಲೆ ದಾಳಿ ನಡೆಸುತ್ತಿದ್ದಾರೆ.ಬೆಂಗಳೂರಿನ ಹಲಸೂರು , ಬಾಣಸವಾಡಿ, ಇಂದಿರಾನಗರ, ಹೆಣ್ಣೂರು, ರಾಮಮೂರ್ತಿ ನಗರ ,ಭಾರತಿನಗರ, ಶಿವಾಜಿನಗರ, ಸೇರಿದಂತೆ ಪೂರ್ವ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಗಳ ಮನೆಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ನಗರದಲ್ಲಿ ಇತ್ತೀಚಿಗೆ ಸರಗಳ್ಳತನ ಹಾಗೂ ಪುಡಿ ರೌಡಿಗಳ ಹಾವಳಿ ಹೆಚ್ಚಾದ ಹಿನ್ನಲೆ ಹಳೇ ರೌಡಿಗಳ ಮನೆಗಳ ಮೇಲೆ ದಾಳಿ ಮಾಡಿರುವ ಪೊಲೀಸರು, ದಾಳಿ ವೇಳೆ ರೌಡಿಗಳ ಇತ್ತೀಚಿನ ಆಕ್ಟಿವಿಟಿ ಬಗ್ಗೆ ಮಾಹಿತಿ ಪಡೆಯುತ್ತಿರುವ ಪೊಲೀಸರು ಅಪರಾಧ ಪ್ರಕರಣದಲ್ಲಿ ಭಾಗಿಯಗಿರುವ ಬಗ್ಗೆ ಮಾಹಿತಿ ಸಿಕ್ಕಲ್ಲಿ ತಕ್ಷಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು ಮತ್ತು ಮನೆಯಲ್ಲಿ ಶೋಧ ನಡೆಸಿ ಮಾರಕಾಸ್ತ್ರಗಳು ಸಿಕ್ಕಲ್ಲಿ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
