
ಶಿಗ್ಗಾವಿ : ಕಾಲೇಜು ವಿದ್ಯಾರ್ಥಿನಿಯನ್ನು ಇಬ್ಬರು ಆರೋಪಿಗಳು ಅಪಹರಿಸಿ ಕಾಡಿನಲ್ಲಿ ದೈಹಿಕ ಸಂಪರ್ಕ ಮಾಡಿ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತೇವೆ ಎಂದು ಬೆದರಿಕೆ ಹಾಕಿದ ಘಟನೆಯೋದು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪ್ರಕರನ ಸಂಬಂಧ ಆರೋಪಿಗಳಾದ ಅಭೀಷೇಕ್ ಲಕ್ಷ್ಮಣಪ್ಪ ಮತ್ತು ಪ್ರವೀಣ್ ಲಮಾಣಿ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.ಪಟ್ಟಣದ ನರ್ಸಿಂಗ್ ಕಾಲೇಜಿನಲ್ಲಿ ಮೊದಲನೇ ವರ್ಷದ ಪ್ಯಾರಾ ಮೆಡಿಕಲ್ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಮಮದಾಪುರ ಗ್ರಾಮದ ಯುವಕರಾದ ಅಭೀಷೇಕ್ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು ಸೆಪ್ಟಂಬರ್ 15 ನೇ ಮದ್ಯಾಹ್ನ 3;30ರ ಆಸುಪಾಸಿನಲ್ಲಿ ಕಾಲೇಜು ಮೊಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಭೀಷೇಕ್ ಲಮಾಣಿ ತನ್ನ ಗೆಳೆಯನ ಜೊತೆ ಸೇರಿ ಬಾಲಕಿಯ ಬಾಯಿಗೆ ಬಟ್ಟೆ ಕಟ್ಟಿ ಅಪಹರಣ ಮಾಡಿ ಮಮದಾಪುರ ಕಾಡಿನಂಚಿಗೆ ಕರೆದೊಯ್ದು ದೈಹಿಕ ಸಂಪರ್ಕ ನಡೆಸಿದ್ದಲ್ಲದೆ ಮೊಬೈಲ್ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿದ್ದಲ್ಲದೆ ಕೆಲ ದಿನಗಳ ನಂತರ ಬಾಲಕಿಯನ್ನು ಹೆದರಿಸಿ ಅಸಭ್ಯವಾಗಿ ನಡೆದುಕೊಂಡಿದ್ದಾನೆ. ಇದರಿಂದ ಮನನೊಂದ ಬಾಲಕಿ ಅಭೀಷೇಕನ ಕಿರುಕುಳ ತಾಳಲಾರದೆ ಸೆ.24ರಂದು ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ತನ್ನ ಮೇಲಾಗುತ್ತಿರುವ ದೌರ್ಜನ್ಯದ ಕುರಿತು ದೂರು ನೀಡಿದ್ದಾಳೆ. ದೂರಿನ ಮೇರೆಗೆ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿ ಕಾವೇರಿಯ ಒನ್ ಸ್ಟಾಪ್ ಅಭಿರಕ್ಷಣೆಯಲ್ಲಿರಿಸಿದ್ದಾರೆ. ಇನ್ನು ಈ ಘಟನೆ ಸಂಬಂಧಿತ ತಾಲ್ಲೂಕಿನ ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.
