
ನಟ ದರ್ಶನ್ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಆರೋಪಿ ದರ್ಶನ್ . ಪರಪ್ಪನ ಅಗ್ರಹಾರದಲ್ಲಿ ಶಿಕ್ಷೆ ಅನುಭವಿಸುತ್ತಿರುವ ದರ್ಶನ್ ತೂಗುದೀಪ ಜೈಲಿನಲ್ಲಿ ಸದ್ಯ ಹೆಚ್ಚುವರಿ ದಿಂಬು ಹಾಸಿಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದೆ. ಈ ವಿಚಾರಣೆಯ ಸಂಬಂಧ ಆದೇಶವನ್ನು ಅ.9ಕ್ಕೆ ಕಾಯ್ದಿರಿಸಿದೆ. ವಿಚಾರಣೆಯ ಸಂದರ್ಭದಲ್ಲಿ ಸರ್ಕಾರಿ ವಕೀಲರು ಮತ್ತು ಆರೋಪಿಯ ವಕೀಲರ ನಡುವೆ ತೀವ್ರ ವಾದ-ಪ್ರತಿವಾದಗಳು ನಡೆಯಿತು.
