ಹಾವೇರಿ: ಅಕ್ರಮವಾಗಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಂಗ್ರಹ ಮಾಡುತ್ತಿದ್ದ ಕಳ್ಳರ ಬಂಧನ ಮಾಡುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಅಕ್ರಮವಾಗಿ ಅನ್ನಭಾಗ್ಯ ಯೋಜನೆಯಡಿ ವಿತರಿಸುತ್ತಿದ್ದ ಸುಮಾರು೧೬.೪೭೫ ಕೆ.ಜಿಯ ಅಕ್ಕಿ ಅಂದಾಜು ೨.೨೦ ಲಕ್ಷ ಮೌಲ್ಯದ ಅಕ್ಕಿ ಚೀಲಗಳನ್ನು ಆಹಾರ ಇಲಾಖಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರ೫ಮ ಅಕ್ಕಿ ಕಳ್ಳತನ ಮಾಡಿದವರ ವಿರುದ್ಧ ಇನ್ನೂ ಕ್ರಮ ತೆಗೆದುಕೊಂಡಿಲ್ಲ ಯಾಕೆ ?
ಮಾಜಿ ಮುಖ್ಯಮಂತ್ರಿಯಾದ ಬಸವರಾಜ್ ಬೊಮ್ಮಾಯಿ ಕ್ಷೇತ್ರದಲ್ಲಿ ಏನಿದು? ನಿಮ್ಮ ತವರು ಕ್ಷೇತ್ರದಲ್ಲಿ ಏನು ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಯಾವಾಗ ?ರಾಜಾರೋಷವಾಗಿ ಕದ್ದ ಅಕ್ಕಿಯನ್ನು ಮಂಡ್ಯ ಮತ್ತು ಹುಬ್ಬಳ್ಳಿಗೆ ಹಸ್ತಾಂತರ ಮಾಡುತ್ತಿದ್ದ ಕಳ್ಳರು. ಈ ಅಕ್ರಮ ಚಟುವಟಿಕೆಯ ಬಗ್ಗೆ ಪ್ರಶ್ನಿಸಿದ ಪತ್ರಕರ್ತರಿಗೆ ಜೀವ ಬೆದರಿಕೆ ಹಾಕುತ್ತಿದ್ದ ಭೂಪರನ್ನು ವಶಕ್ಕೆ ಪಡೆಯಲು ಪೊಲೀಸರು ಯಾಕೆ ಹಿಂಜರಿಯುತ್ತಿದ್ದಾರೆ. ಶಿಗ್ಗಾಂವಿಯ ಶಾಸಕ ಯಾಸೀರ್ ಖಾನ್ ಪಠಾಣ್ ಮತ್ತು ಹಾವೇರಿ ಉಸ್ತುವಾರಿ ಸಚಿವ ಶಿವಾನಂದ್ ಪಾಟೀಲ್ರವರೇ ಏನು ,ಮಾಡುತ್ತಿದ್ದೀರಾ..! ಅಪರಾಧ ಮಾಡಿದವರ ವಿರುದ್ಧ ಕ್ರಮ ಕೈಗಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ.
