ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಲ್ಲಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ದರ್ಶನಕ್ಕಾಗಿ ಭಕ್ತರು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ಹಾಗಾಗಿ ಭಕ್ತರು ಸುಗಮವಾಗಿ ಮಹದೇಶ್ವರನ ದರ್ಶನ ಪಡೆಯಲು ಅನುಕೂಲವಾಗುವಂತೆ ತಿರುಪತಿ ಮಾದರಿಯಂತೆ ಕ್ಯೂ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುತ್ತಿದೆ. ಮಲೆ ಮಹದೇಶ್ವರ ಬೆಟ್ಟವು ದಕ್ಷಿಣ ಭಾರತದ ಪ್ರಮುಖ ಯಾತ್ರಾ ಸ್ಥಳಗಳಲ್ಲೊಂದಾದ ಸ್ಥಳವಾಗಿದೆ.
ಕೋಟ್ಯಂತರ ಭಕ್ತರ ಆರಾಧ್ಯ ದೈವ ಮಲೆಮಹದೇಶ್ವರನ ಸನ್ನಿಧಿಗೆ ನಿತ್ಯ ಸಾವಿರಾರು ಭಕ್ತರು ಬರುತ್ತಿದ್ದಾರೆ. ಅದರಲ್ಲೂ ಅಮಾವಾಸ್ಯೆ, ಜಾತ್ರೆ, ಹಾಗೂ ರಜಾದಿನಗಳಲ್ಲಿ ಭಕ್ತರ ಸಂಖ್ಯೆ ಲಕ್ಷ ದಾಟುತ್ತದೆ. ಶಕ್ತಿ ಯೋಜನೆ ಜಾರಿಯಾದ ನಂತರ ಭಕ್ತರು ಸಂಖ್ಯೆ ಮತ್ತಷ್ಟು ಹೆಚ್ಚಾಗಿದ್ದು ಮಹದೇಶ್ವರ ದರ್ಶನ ಪಡೆಯಲು ಭಕ್ತರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಇದೆ. ಹಾಗಾಗಿ ಭಕ್ತರು ಸುಗಮ ಹಾಗು ಬೇಗ ಮಹದೇಶ್ವರನ ದರ್ಶನ ಪಡೆಯಲು ಅನುಕೂಲವಾಗುವಂತೆ ತಿರುಪತಿ ಮಾದರಿಯಲ್ಲಿ ಕ್ಯೂಕಾಂಪ್ಲೆಕ್ಸ್ ನಿರ್ಮಿಸಲಾಗುತ್ತಿದೆ. ಈ ಕಾಂಪ್ಲೆಕ್ಸ್ ಗಳಲ್ಲಿ ಭಕ್ತರು ಕುಳಿತುಕೊಳ್ಳಲು ಆಸನ ವ್ಯವಸ್ಯ, ಕುಡಿಯುವ ನೀರಿನ ಸೌಲಭ್ಯ, ಉಪಹಾರ, ಮಕ್ಕಳ ಆರೈಕೆ ಕೇಂದ್ರ ಮೊದಲಾದ ಸೌಲಭ್ಯಗಳನ್ನು ಒಳಗೊಂಡಿದೆ
