
ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ ಬೈಕ್-ಕಾರು ಭೀಕರ ಅಪಘಾತ. ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯಲ್ಲಿ ದಾಬಸ್ ಪೇಟೆ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಮೆಣಸಿ ಗೇಟ್ ಬಳಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದಂತಹ ಸಂದರ್ಭದಲ್ಲಿ ಆಕ್ಟಿವ್ ಹೋಂಡಾ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಹೆಸರಘಟ್ಟ ಮೂಲದ ಕನ್ನಯ್ಯ(62) ಎಂದು ಗುರುತಿಸಲಾಗಿದ್ದು. ಕಾರಿನ ಮುಂಭಾಗ ಮತ್ತು ಬೈಕ್ ಸಂಪೂರ್ಣ ಜಖಂಗೊಂಡಿದ್ದು ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ನೀರಿಕ್ಷಕರಾದ ಸಾದಿಕ್ ಪಾಷಾ ನೇತೃತ್ವದಲ್ಲಿ ತನಿಖೆ ಪ್ರಾರಂಭಿಸಿದ್ದಾರೆ.
