
ಬೆಂಗಳೂರು : ಕಳೆದ ಹಲವು ದಿನಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಬಿಜೆಪಿ ನಡುವೆ RSS ಪಥಸಂಚಲನ ಮತ್ತು ಚಟುವಟಿಕೆಗಳ ವಿಚಾರದಲ್ಲಿ ವಾದ- ವಿವಾದಕ್ಕೆ ತೆರೆ ಸಾಧ್ಯತೆ ಇದೆ.ಸಾರ್ವಜನಿಕ ಸ್ಥಳ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳು ಹಾಗೂ ಪಥಸಂಚಲನ ನಿರ್ಬಂಧಿಸಿ ಆದೇಶ ಹೊರಡಿಸಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ನಲ್ಲಿ ಹಿನ್ನಡೆ ಉಂಟಾಗಿದೆ. ಪಥಸಂಚಲನ ನಿರ್ಬಂಧಿಸುವ ಸಂಬಂಧ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ಮ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ ಇಂದು ಮಧ್ಯಂತರ ತಡೆಯಾಜ್ಞೆ ನೀಡಿದೆ.
10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ನೀಡದೇ ಇರುವ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ನ ಧಾರವಾಡ ಪೀಠಕ್ಕೆ ಸಂಸ್ಥೆ ರಿಟ್ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ರಾಜ್ಯ ಸರ್ಕಾರ, ಗೃಹ ಇಲಾಖೆ, ಹುಬ್ಭಳ್ಳಿ ಕಮಿಷನರ್ಗೆ ನೋಟಿಸ್ ನೀಡಿದೆ.
ಹೈಕೋರ್ಟ್ ಇಂದು ಹೇಳಿದ್ದೇನು?
ಅ.18 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಆರ್ಎಸ್ಎಸ್ ಪ್ರಶ್ನೆ ಮಾಡಿ ಅರ್ಜಿ ಸಲ್ಲಿಸಿತ್ತು. ಈ ವಿಚಾರ ಸರ್ಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್ನ ಧಾರವಾಡ ಪೀಠ, ಅನುಮತಿಯಿಲ್ಲದೇ 10 ಜನ ಜನ ಸೇರಿದರೆ ಅಪರಾಧವೆಂದು ಸರ್ಕಾರದ ಆದೇಶದಲ್ಲಿದೆ. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಪೊಲೀಸ್ ಕಾಯ್ದೆಯಲ್ಲಿ ಇರುವ ಅಧಿಕಾರವನ್ನು ಸರ್ಕಾರ ಆದೇಶದ ಮೂಲಕ ಚಲಾಯಿಸಿದೆ. ಸಂವಿಧಾನದ ಆರ್ಟಿಕಲ್ 19 (1)A, B, ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ. ಸಂವಿಧಾನ ನೀಡಿರುವ ಹಕ್ಕನ್ನು ಸರ್ಕಾರಿ ಆದೇಶ ಕಿತ್ತುಕೊಳ್ಳಲಾಗದು ಎಂದು ಅಭಿಪ್ರಾಯಪಟ್ಟಿದೆ.
ಕಲಬುರಗಿ ಚಿತ್ತಾಪುರದ ಆರ್ಎಸ್ಎಸ್ ಪಥಸಂಚಲನ
ಕಲಬುರಗಿ ಚಿತ್ತಾಪುರದ ಆರ್ಎಸ್ಎಸ್ ಪಥಸಂಚಲನ ವಿಚಾರವಾಗಿ ಹೈಕೋರ್ಟ್ನ ಕಲಬುರಗಿ ಪೀಠ ಈಗಾಗಲೇ ವಿಚಾರಣೆ ನಡೆಸಿದ್ದು, ಚಿತ್ತಾಪುರದಲ್ಲಿನ ಪರಿಸ್ಥಿತಿ ಪರಿಗಣಿಸಿ ಅಕ್ಟೋಬರ್ 30ರಂದು ವರದಿ ನೀಡುವಂತೆ ಕೋರ್ಟ್ ತಿಳಿಸಿದೆ.
