ಬೆಳಗಾವಿ : ಸುಳೆಗಾಳಿ ಗ್ರಾಮದ ಹೊರವಲಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆಯೊಂದು ಮೃತಪಟ್ಟಂತಹ ಹೃದಯ ವಿದ್ರಾವಕ ಘಟನೆ ನಡೆದಿದೆ. ಗ್ರಾಮದ ಹೊರವಲಯದಲ್ಲಿ ಕಾಡಾನೆಯೊಂದು ರೈತನ ಜಮೀನಿನ ಬಳಿ ಹಾದು ಹೋಗುತ್ತಿದ್ದಂತಹ ವೇಳೆಯಲ್ಲಿ ವಿದ್ಯುತ್ ತಂತಿ ದಾಟುವ ಸಂದರ್ಭದಲ್ಲಿ ಕಾಲಿಗೆ ತಂತಿ ತಾಗಿ ವಿದ್ಯುತ್ನಿಂದ ಮೃತಪಟ್ಟಿದೆ. ಸ್ಥಳಕ್ಕೆ ಆಗಮಿಸಿದ ಪೊಲಿಶ್ ಸಿಬ್ಬಂದಿ ಮತ್ತು ಅರಣ್ಯಾಧಿಕಾರಿಗಳು ಆನೆಗಳ ಸಾವಿನ ತನಿಖೆ ನಡೆಸುತ್ತಿದ್ದಾರೆ.
ಗ್ರಾಮದ ಸುತ್ತ-ಮುತ್ತ ಕಾಡಾನೆ ಉಪಟಳ ಹೆಚ್ಚಾಗಿದೆ ಎಂಬ ಕಾರಣಕ್ಕೆ ವಿದ್ಯುತ್ ತಂತಿ ಬೇಲಿ ಅಲವಡಿಸಿದ ಹಿನ್ನೆಲೆ, ಕಾಡಾನೆಗಳು ತಂತಿಬೇಲಿ ದಾಟುವಂತಹ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದ ಆನೆಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ನಿಖರ ಕಾರಣ ತಿಳಿಯುತ್ತದೆ ಎಂದು ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
