
ಬೆಂಗಳೂರು: ದೆಹಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೈ ಅಲರ್ಟ್ ಆಗಿದ್ದಾರೆ. ಬೆಂಗಳುರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಎಚ್ಚರಿಕೆಯನ್ನು ಘೋಷಣೆ ಮಾಡಿದ್ದಾರೆ. ಬೆಂಗಳುರಿನ ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ, ಸಿನಿಮಾ ಮಂದಿರಗಳು ಸೇರಿದಂತೆ ಮಾಲ್ಗಳು ಮತ್ತು ದೇವಾಲಯಗಳಲ್ಲಿ ತೀವ್ರ ಗಸ್ತು ನಿಗಾವಹಿಸಿ ಕಟ್ಟಚ್ಚರ ವಹಿಸಲು ಮತ್ತು ಪೊಲೀಸ್ ಗಸ್ತುಗಳನ್ನು ಹೆಚ್ಚಿಸಲು ಸೂಚನೆ ನೀಡಿದೆ. ಸಾವಿರ ಆರು ಊರಿನಲ್ಲಿ ಅನುಮಾನಸ್ಪದವಾಗಿ ಓಡಾಡುವ ವ್ಯಕ್ತಿಗಳ ಮೇಲೆ ನಿಗಾ ಇಡುವಂತೆ ಮತ್ತು ಹೋಟೆಲ್ ಲಾಡ್ಜ್ಗಳಲ್ಲಿ ತಂಗಿರುವವರ ವಿಚಾರಣೆ ಮಾಡಲು ಆಗ್ರ ಹಿಸಿದ್ದಾರೆ. ಇದಲ್ಲದೆ ಬೆಂಗಳೂರಿನ ವಿಮಾನ ನಿಲ್ದಾಣ, ಮೆಟ್ರೋ ನಿಲ್ದಾಣಗಳಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ತೆ ಮಾಡಲಾಗಿದೆ. ನಿನ್ನೆ ಸಂಭವಿಸಿದ ಬಾಂಬ್ ಪ್ರಕರಣದಲ್ಲಿ 9 ಮಂದಿ ಮೃತರಾಗಿದ್ದು, 20 ಕ್ಕೂ ಹೆಚ್ಚು ಮಂದಿ ಗಂಭೀರಗೊಂಡಿದ್ದಾರ ಎಂದು ತಿಳಿಸಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೆಹಲಿಯ ಕೆಂಪುಕೋಟಎ ಬಳಿ ಸಂಭವಿಸಿದ ಕಾರು ಸ್ಪೋಟದ ಬಗ್ಗೆ ಮಾಹಿತಿ ತಿಳಿದ ಮುಖ್ಯಮಂತ್ರಿಯವರು ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ದೆಹಲಿ ಸ್ಪೋಟದ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮತ್ತು ಭದಸ್ರತೆ ಹೆಚ್ಚಿಸಲು ಪೊಲೀಸ್, ಹಾಗೂ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ. ಘಟನೆಯಲ್ಲಿ ಮೃತ ವ್ಯಕ್ತಿಗಳ ಆತ್ಮಕ್ಕೆ ಶಾಂತಿ ಮತ್ತು ಗಾಯಾಳುಗಳು ಆದಷ್ಟು ಬೇಗನೆ ಚೇರಿಸಿಕೊಳ್ಳಿ ಎಂದು ಸಂತಾಪ ಸೂಚಿಸಿದ್ದಾರೆ. ಸ್ಥಳಗಳಲ್ಲಿ ಅನುಮಾನಸ್ಪದ ವ್ಯಕ್ತಿಗಳು ಓಡಾಡುವುದು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
