ದೆಹಲಿ: ಇಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿದ್ದು, ಖರ್ಗೆ ಜೊತೆ ಸಭೆ ಮಾಡಲಿದ್ದು, ತದ ನಂತರ ಸಂಜೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲಿದ್ದಾರೆ. ಈ ಹಿಂದೆ ಸಿಎಂ ಕೆಲ ವಿಚಾರಗಳ ಚರ್ಚೆ ಕುರಿತು ಪತ್ರ ಬರೆದಿದ್ದ ಸಿಎಂ ಸಿದ್ದರಾಮಯ್ಯ , ಇಂದು ಮೋದಿಯವರನ್ನು ಭೇಟಿ ಮಾಡಿ ರಾಜ್ಯದಲ್ಲಿ ನಡೆಯುತ್ತಿರುವ ಕಬ್ಬಿನ ಬೆಂಬಲ ಬೆಲೆ ನಿಗದಿ ಆಗ್ರಹಿಸಿ ರೈತರ ಪ್ರತಿಭಟನೆ ಕುರಿತು ಪ್ರಸ್ತಾಪಿಸಿ ಕಬ್ಬಿನ ಬೆಂಬಲ ಬೆಲೆ ಹೆಚ್ಚಳ ಮಾಡುವಂತೆ ಹಲವಾರು ಬೇಡಿಕೆಗಳನ್ನು ಪ್ರಧಾನಮಂತ್ರಿಯವರ ಮುಂದಿಡಲಿದ್ದಾರೆ. ಕಬ್ಬಿನ ಬೆಂಬಲ ಬೆಲೆ ಹೆಚ್ಚಿಸುವಂತೆ ಕೋರಿ ರೈತರ ಕಬ್ಬಿಗೆ ಬೆಂಬಲ ಬೆಲೆ, ಸಕ್ಕರೆಯ ಎಂಎಸ್ಪಿ ದರ ಹೆಚ್ಚಳ ಸೇರಿದಮತೆ ರೈತರ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಪ್ರತಿ ಟನ್ ಕಬ್ಬಿಗೆ ಕನಿಷ್ಟ 3.500ರೂಪಾಯಿಗೆ ಆಗ್ರಹಿಸಿ ರಾಜ್ಯದಲ್ಲಿ ಕಬ್ಬು ಬೆಳೆಗಾರರು ಹೋರಾಟವನ್ನು ತೀವ್ರತೆ ಪಡೆದಿದ್ದಾಗ ಸಿಎಂ ಪ್ರಧಾನಿಗೆ ಈ ಕುರಿತು ಪತ್ರ ಬರೆದಿದ್ದರು.ಇನ್ನು ಭೇಟಿ ಸಂದರ್ಭದಲ್ಲಿ ಕಬ್ಬಿನ ಬೆಂಬಲ ಬೆಲೆ ಸೇರಿದಂತೆ ಸಕ್ಕರೆ ಕನಿಷ್ಠ ಬೆಂಬಲ ಬೆಲೆ ದರ ಹೆಚ್ಚಳ, ಜಿಎಸ್ಟಿ, ಮೇಕೆದಾಟು, ಮಹದಾಯತಿ,ಕೃಷ್ಣಾ 3ನೇ ಹಂತದ ನೀರಾವರಿ ಯೋಜನೆ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ.
