
ಬೆಂಗಳೂರು: ಬೆಂಗಳೂರಿನ ಎಟಿಎಂ ಘಟಕಗಳಿಗೆ ಹಣ ಪೂರೈಸುತ್ತಿದ್ದ ಖಾಸಗಿ ಏಜೆನ್ಸಿ ವಾಹನವನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ ಪಿಸ್ತೂಲ್ ತೋರಿಸಿ ಜೀವ ಬೆದರಿಕೆ ಹಾಕಿ ದುಷ್ಕರ್ಮಿಗಳು 7.11 ಕೋಟಿ ರೂಪಾಯಿ ಹಣವನ್ನು ದೋಚಿರುವ ಘಟನೆ ಬೆಂಗಳೂರಿನಲ್ಲಿ ನೆಡೆದಿದೆ.
ಜೆ.ಪಿ.ನಗರದ ಹೆಚ್ಡಿಎಫ್ಸಿ ಬ್ಯಾಂಕ್ನಿಂದ ಹಣ ಸಂಗ್ರಹಿಸಿ ಗೋವಿಂದಪುರದ ಎಟಿಎಂ ಘಟಕಗಳಿಗೆ ತುಂಬಲು ಸಿಎಂಎಸ್ ಏಜೆನ್ಸಿಯ ನಾಲ್ವರು ಸಿಬ್ಬಂದಿಗಳು ತೆರಳುತ್ತಿದ್ದರು. ಅದೇ ಮಾರ್ಗದ ಮಧ್ಯೆ ವಾಹನವನ್ನು ಅಡ್ಡಗಟ್ಟಿ ನಾವು ಆರ್ಬಿಐ ಅಧಿಕಾರಿಗಳು ಎಂದು ಅಡ್ಡಗಟ್ಟಿ ಆರು ಮಂದಿ ದರೋಡೆಕೋರರು ಕೃತ್ಯ ಎಸಗಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಪರಿಚಿತರ ಕೈವಾಡವಿರುವ ಬಗ್ಗೆ ಕೃತ್ಯದಲ್ಲಿ ಪರಿಚಿತರ ಕೈವಾಡವಿರುವುದರ ಬಗ್ಗೆ ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
