ಚಿತ್ರದುರ್ಗ: ನಿಂತಿರುವ ಟ್ರ್ಯಾಕ್ಟರ್ಗೆ ಎದುರುಗಡೆಯಿಂದ ಬಂದು ಡಿಕ್ಕಿ ಹೊಡೆದ ಬೈಕ್. ಡಿಕ್ಕಿ ರಭಸಕ್ಕೆ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನ ಹೊಸಕಲ್ಲಹಳ್ಳಿ ಗ್ರಾಮ್ದ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಸಹೋದರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಜೋಡಿಚಿಕ್ಕೇನಹಳ್ಳಿಯ ಮನೋಜ್ ( 26), ಮತ್ತೋರ್ವ ವ್ಯಕ್ತಿ ಮೃತ ದುರ್ದೈವಿಗಳು. ಅತೀ ವೇಗದಿಂದ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಸಣ್ಣ ತಿರುವಿನ ಭಾಗದಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಕಂಡು ನಿಯಂತ್ರಿಸಲು ಮುಂದಾದಾಗ ನಿಯಂತ್ರಣ ಸಿಗದೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವದಿಂದ ಮನೋಜ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಕುಳಿತಿದ್ದ ಹರೀಶ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಗ್ರಾಮಾಂತರ ಠಾಣಾ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
