ಕೋಲಾರ : ಕೋಲಾರದ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ಹೈವೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಮಾಲೂರು ತಾಲೂಕಿನ ಅಬ್ಬೇನಹಳ್ಫಿ ಬಳಿ ಘಟನೆ ಡಿವೈಡರ್ಗೆ ಕಾರು ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಮೇಲಿಂದ ಕೆಳಗೆ ಬಿದ್ದಿದ್ದು, ಸಂಪೂರ್ಣ ಜಖಂಗೊಂಡಿದೆ.
ಕೋಲಾರದಲ್ಲಿ ಭೀಕರ ಅಪಘಾತ
ಬೆಂಗಳೂರು-ಚನ್ನೈ ಎಕ್ಸ್ಪ್ರೆಸ್ ಹೈವೆಯಲ್ಲಿ ಮಧ್ಯರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಡಿವೈಡರ್ಗೆ ಡಿಕ್ಕಿಯೊಡೆದ ಕಾರು ಬಳಿಕ ಬ್ರಿಡ್ಜ್ನಿಂದ ಕೆಳಗೆ ಬಿದ್ದಿದೆ. ಕಾರಿನಲ್ಲಿ ಪ್ರಯಾಣ ಮಾಡ್ತಿದ್ದ ನಾಲ್ವರು ಮೃತಪಟ್ಟಿದ್ದಾರೆ.
ಚಿಕಿತ್ಸೆ ಫಲಿಸದೆ ನಾಲ್ವರ ಸಾವು
ಗೋಪಿ(38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತ ಯುವಕರಾಗಿದ್ದಾರೆ. ಅಪಘಾತದ ಬಳಿಕ ನಾಲ್ವರನ್ನಕೋಲಾರದ ಅರ್ ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಾಲ್ವರು ಕೊನೆಯುಸಿರೆಳೆದಿದ್ದಾರೆ.
ನಾಲ್ವರು ಮೃತರು ಚೆನ್ನೈ ಮೂಲದವರು
ಮೃತರೆಲ್ಲರೂ ಚೆನ್ನೈ ಮೂಲದವರಾಗಿದ್ದಾರೆ. ತಮಿಳುನಾಡಿನಿಂದ ಬೆಂಗಳೂರಿನ ಕಡೆ ಬರುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗ್ತಿದೆ. ಈ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
