
ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್. ಬಸ್ನಲ್ಲಿದ್ದ ಆರು ಮಂದಿ ಗಂಭೀರ ಗಾಯ, ಚಿತ್ರದುರ್ಗದ ದಂಡಿಗನಕುರುಬರಹಟ್ಟಿ ರಸ್ತೆ ಬಳಿ ನಡೆದಿದೆ.
ಚಳ್ಳಕೆರೆಯಿಂದ ಚಿತ್ರದುರ್ಗದ ಕಡೆಗೆ ಬರುತ್ತಿದ್ದ ಎರಡು ಖಾಸಗಿ ಬಸ್ಗಳು ಓವರ್ ಟೇಕ್ ಮಾಡಲು ಹೋಗಿ ಬಲಭಾಗದಲ್ಲಿದ್ದ ಬಸ್ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬಲ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣ ನಜ್ಜು-ಗುಜ್ಜು, ಚಾಲಕನ ಕಾಲಿಗೆ ತೀವ್ರ ಪೆಟ್ಟಾಗಿದ್ದು, ಬಸ್ನಲ್ಲಿ ಪ್ರಯಾಣಿಸುತ್ತಿದ್ದವರಲ್ಲಿ 6 ಮಂದಿಗೆ ಗಂಭೀರ ಗಾವಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
