ಕಲಬುರ್ಗಿ : ಕಲಬುರ್ಗಿ ಜಿಲ್ಲೆಯ ಜೇವರ್ಗಿಯ ಗೌನಹಳ್ಳಿ ಕ್ರಾಸ್ ಬಳಿ ಭೀಕರ ಕಾರು ಅಪಘಾತ ಸಂಭವಿಸಿದ ಪರಿಣಾಮ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ದುರ್ಮರಣ.
ನಿನ್ನೆ ಸಂಜೆ ನಡೆದ ಭೀಕರ ಕಾರು ಅಪಘಾತದಲ್ಲಿ ಕರ್ನಾಟಕ ರಾಜ್ಯ ಖನಿಜ ನಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (51) ಸೇರಿದಂತೆ ಮೂವರು ,ಮೃತಪಟ್ಟಿದ್ದಾರೆ. ಕಲಬುರಗಿಗೆ ಬರುತ್ತಿದ್ದ ಇನೋವಾ ಕಾರು ಚಲಿಸುತ್ತಿದ್ದ ವೇಳೆ ನಾಯಿ ಅಡ್ಡ ಬಂದ ಕಾರಣಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ. ಕಾರಿನಲ್ಲಿ ಮಹಂತೇಶ್ ಬೀಳಗಿ ಸೇರಿ ಸೋದರ ಬಂಧು ಈರಣ್ಣ ಶಿರಸಂಗಿ ಪ್ರಯಾಣಿಸುತ್ತಿದ್ದರು. ಅಪಘಾತದ ತೀವ್ರತೆಗೆ ಶಂಕರ ಮತ್ತು ಈರಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಹಾಂತೇಶ್ರವರನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ಧಾರೆ
