ಕಲಬುರಗಿ : ಕಲಬುರ್ಗಿಯ ಯಡ್ರಾಮಿ ತಾಲ್ಲೂಕಿನ ಇಜೇರಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶಾಲಾ ವಿದ್ಯಾರ್ಥಿನಿ ಲಕ್ಷ್ಮೀ ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಹತ್ತಿ ತುಂಬಿಕೊಂಡು ಅಶೋಖ ಲೇಲ್ಯಾಂಡ್ ವಾಹನವೊಂದು ಹತ್ತಿ ತುಂಬಿಕೊಂಡು ಕುಳಗೇರಿಯಿಂದ ಚಿಗರಳ್ಳಿಯತ್ತ ಹೋಗುತ್ತಿದ್ದ ವಾಹನ. ಅತೀ ವೇಗದಲ್ಲಿ ಚಲಿಸುತ್ತಿದ್ದ ವೇಳೆ ಶಾಲೆಯಿಂದ ಹೊರ ಬಂದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಾಲಕಿಯ ಕಾಲಿಗೆ ಪೆಟ್ಟಾಗಿದ್ದು, ಒಂದು ಭಾಗದ ಕಾಲು ಮುರಿದಿದೆ.
ಶಾಲೆ ಯಲ್ಲಿ ನೀರಿನ ವ್ಯವಸ್ಥೆ ಇಲ್ಲ?
ಇಜೇರಿ ಶಾಲೆಯಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದ ಕಾರಣ, ವಿದ್ಯಾರ್ಥಿಗಳು ಪ್ರತಿದಿನವೂ ಶಾಲೆ ಹೊರಗಡೆಯಲ್ಲಿರುವ ಬೋರ್ವೆಲ್ಗೆ ನೀರು ಕುಡಿಯಲು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆ ಕುರಿತು ಸ್ಥಳೀಯರು ಶಾಲಾ ಆಡಳಿತದ ಗಮನಕ್ಕೆ ತಂದಿದ್ದರೂ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಲಕ್ಷ್ಮಿ ನೀರು ಕುಡಿಯಲು ಬೋರ್ವೆಲ್ ಕಡೆಗೆ ಹೋಗುತ್ತಿದ್ದ ವೇಳೆ ಅಕಸ್ಮಾತ್ ಎದುರು ಬರುವ ಲಾರಿ ವೇಗ ನಿಯಂತ್ರಣ ಕಳೆದುಕೊಂಡು ಬಾಲಕಿಗೆ ಡಿಕ್ಕಿ ಹೊಡೆದಿರುವುದು ಈ ದುರಂತಕ್ಕೆ ಕಾರಣವಾಗಿದೆ.
ರಸ್ತೆ ತಡೆದು ಗ್ರಾಮಸ್ಥರ ಪ್ರತಿಭಟನೆ : ಅಪಘಾತದ ಬಳಿಕ ಘಟನಾ ಸ್ಥಳಕ್ಕೆ ಬಂದ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿ, ಶಾಲೆಯ ದುರ್ವ್ಯವಸ್ಥೆ ಹಾಗೂ ವಾಹನಗಳ ಅತಿವೇಗ ಸಂಚಾರದ ವಿರುದ್ಧ ಘೋಷಣೆ ಕೂಗಿ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ತಕ್ಷಣವೇ ASI ಹಾಗೂ ಪೊಲೀಸ್ ಸಿಬ್ಬಂದಿ ಧಾವಿಸಿ. ಪ್ರತಿಭಟನೆಯನ್ನು ಸಂತೈಸಿ, ಪ್ರಕರಣವನ್ನು ದಾಖಲಿಸಿ ಮುಂದಿನ ಕ್ರಮ ಜರುಗಿಸಲು ಪೊಲೀಸರು ಭರವಸೆ ನೀಡಿದರು.
ತೀವ್ರ ಗಾಯಗೊಂಡಿದ್ದ ಬಾಲಕಿಯನ್ನು ಸ್ಥಳೀಯರು ಜೇವರ್ಗಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
