
ಚಿತ್ರದುರ್ಗ: ಹಿಂಬದಿಯಿಂದ ವೇಗವಾಗಿ ಚಲಾಯಿಸಿಕೊಂಡು ಬಂದ ಕೋಳಿ ಸಾಗಾಣಿಕೆಯ ಆಪ್ಪೆ ವಾಹನವೊಂದು ಕಬ್ಬಿಣದ ಅದಿರಿನ ಲಾರಿಗೆ ಡಿಕ್ಕಿ ಹೊಡೆದ ಘಟನೆ, ಚಿತ್ರದುರ್ಗದ ಹಿರಿಯೂರಿನ ಹಿಂಡಸಕಟ್ಟೆ ಬಳಿ ನಡೆದಿದೆ. ಘಟನೆಯಲ್ಲಿ 22 ವರ್ಷದ ಚಂದನ್ ಗೌಡ ಮತ್ತು 17 ವರ್ಷದ ಕುಮಾರ್ ಎಂಬ ಯುವಕರು ಮೃತಪಟ್ಟಿದ್ದಾರೆ. ವೇಗದಿಂದ ಚಲಾಯಿಸಿಕೊಂಡು ಬಂದ ವಾಹನ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತೀ ವೇಗದ ಚಾಲನೆಯಿಂದ ಈ ಘಟನೆ ಸಂಭವಿಸಿದ್ದು,
ಘಟನೆ ಸಂಬಂಧ ಹಿರಿಯೂರು ಗ್ರಾಮಾಂತರ ಠಾಣಾ ಪಿಎಸ್ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ , ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ಧಾರೆ.
