ಗದಗ : ಹಿಂಬದಿಯಿಂದ ವೇಗವಾಗಿ ಬಂದ ಬುಲೆರೋ ವಾಹನ ಬೈಕ್ಗೆ ಡಿಕ್ಕಿ, ಡಿಕ್ಕಿ ಹೊಡೆದ ರಭಸಕ್ಕೆ ಕೆಳಕ್ಕೆ ಬಿದ್ದ ಬೈಕ್ ಸವಾರ.ಡಿಕ್ಕಿ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗದ ಹರ್ತಿ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಪೌರ ಕಾರ್ಮಿಕರಾದ ನೀಲಪ್ಪ ದೊಡ್ದಮನಿ(57) ಸ್ಥಳದಲ್ಲೇ ಮೃತ. ಸವಾರ ಮಂಜುನಾಥ್ ಕರಿಗೊಳಪ್ಪ ಗಂಭೀರ ಗಾಯಗೊಂಡಿದ್ದು, ಗದಗದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಗದಗದ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

