ಚಿತ್ರದುರ್ಗ: ಟ್ರ್ಯಾಕ್ಟರ್-ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕ ಪ್ರಶಾಂತ್ (33) ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಹೆದ್ದಾರಿ 150ಎ ಬಳಿ ನಡೆದಿದೆ. ನಿನ್ನೆ ರಾತ್ರಿ 8:40ರ ವೇಳೆ ಮೆಕ್ಕೆ ಜೋಳ ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾದ ಟ್ರ್ಯಾಕ್ಟರ್, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಚಳ್ಳಕೆರೆ ಠಾಣಾ ಪೊಲೀಸ್ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
