ಗೋಕಾಕ್ : ಗೋಕಾಕ್ ಪ್ರತ್ಯೇಕ ಜಿಲ್ಲೆಗಾಗಿ ಆಗ್ರಹಿಸಿ ತಾಲುಕಾ ಹೋರಾಟ ಸಮಿತಿ ಮತ್ತು ನ್ಯಾಯವಾದಿಗಳ ಸಂಘದಿಂದ, ನಗರದ ಸಂಗೋಳ್ಳಿ ರಾಯಣ್ಣನ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಬಸವೇಶ್ವರ ವೃತ್ತದಲ್ಲಿ ಬೃಹತ್ ಪ್ರತಿಭಟನೆಯನ್ನು ಮಾಡಿದರು.
ಸತತವಾಗಿ 40 ವರ್ಷಗಳಿಂದ ಗೋಕಾಕ್ ಪ್ರತ್ಯೇಕ ಜಿಲ್ಲೆಗಾಗಿ ಹೋರಾಟ ಮಾಡುತ್ತಿದ್ದೇವೆ, ಡಿಸೆಂಬರ್ ಅಂತ್ಯದೊಳಗೆ ಗೋಕಾಕ್ ಜಿಲ್ಲೆಯಾಗಬೇಕು, ರಾಜಕಾರಣಿಗಳ ವಿರೋಧದಿಂದ ಜಿಲ್ಲೆಯಾಗಿ ಪರಿವರ್ತನೆಯಾಗಿಲ್ಲ. ಜಿಲ್ಲೆಯನ್ನಾಗಿ ಪರಿವರ್ತಿಸಲು ಶೂನ್ಯ ಸಂಪಾದನಮಠದ ಶ್ರೀಗಳ ನೇತೃತ್ವದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಗೋಕಾಕ್ ಜಿಲ್ಲೆಯನ್ನಾಗಿ ಪರಿವರ್ತಿಸದಿದ್ದಲ್ಲಿ ಉಗ್ರವಾದ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

