ಬಾಗಲಕೋಟೆ : ಜಮಖಂಡಿಯ ಸಿದ್ದಾಪುರ ಗ್ರಾಮದ ಬಳಿ ಬಾಗಲಕೋಟೆ–ವಿಜಯಪುರ ಹೆದ್ದಾರಿಯಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ 1 ಗಂಟೆಯ ಸುಮಾರಿಗೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಸಿದ್ದಾಪುರದವರೇ ಎಂಬುದು ಗೊತ್ತಾಗಿದೆ. ಜಮಖಂಡಿ ಗ್ರಾಮೀಣ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಒಬ್ಬ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಚಿಕಿತ್ಸೆ ಫಲಿಸದೆ ಅಸುನೀಗಿದ್ದಾನೆ.
ಮೃತರನ್ನು ವಿಶ್ವನಾಥ ಕಂಬಾರ (17), ಗಣೇಶ್ ಅರಳಿಮಟ್ಟಿ (20), ಈಶು ಕಂಬಾರ, ಪ್ರವೀಣ ಶೇಡಬಾಳ (22) ಮತ್ತು ಚಿಕಿತ್ಸೆಯ ಸಮಯದಲ್ಲಿ ಮೃತಪಟ್ಟ ಪ್ರಜ್ವಲ್ ಶೇಡಬಾಳ (17) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟವರು ಹಾಗೂ ಗಾಯಾಳುಗಳು ಎಲ್ಲರೂ ಸಿದ್ದಾಪುರ ಗ್ರಾಮದವರೇ ಎಂದು ತಿಳಿದುಬಂದಿದೆ.
