ಧಾರವಾಡ: ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಳೆದ ರಾತ್ರಿ ತಮ್ಮ ನಿವಾಸಕ್ಕೆ ತೆರಳುವ ವೇಳೆ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಪೆಟ್ರೋಲ್ ಟ್ಯಾಂಕ್ಗೆ ಹಾನಿಯಾದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಹಾವೇರಿಯಲ್ಲಿ ಕೆಲಸ ಮಾಡುತ್ತಿದ್ದ ಪಂಚಾಕ್ಷರಿ, ಮುರ್ಗೋಡಿನ ತಮ್ಮ ನಿವಾಸಕ್ಕೆ ತೆರಳುತ್ತಿದ್ದ ವೇಳೆ ಅಣ್ಣಿಗೇರಿ ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ಸಜೀವ ದಹನಗೊಂಡು ಮೃತಪಟ್ಟಿದ್ದಾರೆ.
ಚಾಲನೆ ಮಾಡಿಕೊಂಡು ಹೋಗುತ್ತಿದ್ದ ವೇಳೆ ದಿಢೀರ್ ಪೆಟ್ರೋಲ್ ಟ್ಯಾಂಕ್ಗೆ ಬೆಂಕಿ ತಗುಲಿ ಏಕಾಏಕಿ ಕಾರಿನ ಸುತ್ತ ಆವರಿಸಿಕೊಂಡು ಹೊತ್ತಿ ಉರಿದಿದೆ. ಇದರಿಂದ ಹೊರಬರಲಾಗದೆ ಒಳಗೆ ಸಿಲುಕಿಕೊಂಡಿದ್ದು, ಸ್ಥಳೀಯರಿಂದ ಅಧಿಕಾರಿಯನ್ನು ಉಳಿಸಲು ವಿಫಲರಾದರು. ಅಣ್ಣಿಗೇರಿ ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿಪ್ರತ್ಯಕ್ಷದರ್ಶಿ ಸಾಕ್ಷಿ ಪಡೆದುಕೊಂಡರೂ, ತನಿಖೆ ನಂತರ ನಿಖರ ಕಾರಣಕ್ಕಾಗಿ ಕಾಯುತ್ತಿದ್ದಾರೆ.

