ಚಿತ್ರದುರ್ಗ: ರೈಲಿಗೆ ತಲೆ ಕೊಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದ ಎಪಿಎಂಸಿ ಮಾರುಕಟ್ಟೆಯ ರೈಲ್ವೇ ಬ್ರಿಡ್ಜ್ ಬಳಿ ನಡೆದಿದೆ. ಎಪಿಎಂಸಿ ಮಾರುಕಟ್ಟೆ ಬಳಿಯ ರೈಲು ಹಳಿ ಬಳಿ ರೈಲಿಗೆ ತಲೆ ಕೊಟ್ಟು ಸಾವನ್ನಪ್ಪಿದ್ದು, ಸಾವನ್ನಪ್ಪಿರುವ ಮಹಿಳೆ ನಗರದ ಗೋಪಾಲಪುರ ರಸ್ತೆಯ 30 ವರ್ಷದ ರೂಪಾ ಎಂದು ಗುರುತಿಸಲಾಗಿದೆ. ಕೂಟುಂಬಿಕ ಕಲಹ ಕಾರಣ ಪತಿಯೊಂದಿಗೆ ಜಗಳ ಮಾಡಿಕೊಂಡು ಮನನೊಂದು ಚಲಿಸುವ ರೈಲಿಗೆ ಅಡ್ಡಲಾಗಿ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
