ಚಳ್ಳಕೆರೆ : ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಕಾಲುವೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಶನಿವಾರ ಸುಮಾರು ರಾತ್ರಿ 9ರ ವೇಳೆಯಲ್ಲಿ ಹೊಸೂರು ಮಾರ್ಗವಾಗಿ ಬರುವ ವೇಳೆ ಘಟನೆ ನಡೆದಿದೆ.
ಘಟನೆಯಲ್ಲಿ ಪ್ರಕಾಶ್ (30) ಮತ್ತು ಮಧು(35) ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳು. ಚಾಲನೆ ವೇಳೆ ಆಯಾ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಂಜಾನೆ ರೈತರು ಬೆಳಗ್ಗೆ ನೀರು ಹಾಯಿಸಲು ಹೋದಂತಹ ಸಂದರ್ಭದಲ್ಲಿ ರೈತನೋರ್ವ ನೋಡಿ ಪೊಲೀಸ್ಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
