ಬೆಳಗಾವಿ : ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಯಡಿಯೂರಪ್ಪ ಮಾರ್ಗಲ್ಲಿರುವ ಮಾಲಿನಿ ಸಿಟಿ ಮೈದಾನದಲ್ಲಿ ಬಿಜೆಪಿ ಸರ್ಕಾರದಿಂದ ಬೃಹತ್ ಪ್ರತಿಭಟನಾ ಪ್ರದರ್ಶನ”ರೈತ-ವಿರೋಧಿ ಕಾಂಗ್ರೆಸ್ ಸರ್ಕಾರ, ರೈತ-ಬೆಂಬಲಿತ ಬಿಜೆಪಿ” ಎಂಬ ಘೋಷಣೆಯೊಂದಿಗೆ, ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನೀಡುವಂತೆ ಮತ್ತು ಮೆಕ್ಕೆಜೋಳ, ತೊಗರಿ, ಸೇರಿ ವಿವಿಧ ಬೆಳೆಗಳಿಗೆ ಖರೀದಿ ಕೇಂದ್ರ ಸ್ಥಾಪನೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಚಲವಾದಿ ನಾರಾಯಣಸ್ವಾಮಿ, ಶಾಸಕ ಬಾಲಚಂದ್ರ ಜಾರಕಿಹೊಳಿ, ನಿಖಿಲ್ ಕಟ್ಟಿ, ಸಿ ಟಿ ರವಿ, ಎನ್ ರವಿಕುಮಾರ್ ಮತ್ತು ಇತರ ಅನೇಕ ಬಿಜೆಪಿ ನಾಯಕರು ಸಾವಿರಾರು ರೈತ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
