
ರಾಯಚೂರು: ರಾತ್ರಿ ಪಾಳಿ ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನೌಕರ ಸ್ಥಳದಲ್ಲೇ ಸಾವು. ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿದ್ದ ದಿನಗೂಲಿ ನೌಕರನೋರ್ವನ ಮೇಲೆ ಹರಿದ ಲಾರಿ. ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ದಿನಗೂಲಿ ನೌಕರನ ಪ್ರಾಣವೇ ಹೋಯ್ತು. ರಾಯಚೂರಿನ ಲಿಂಗಸಗೂರು ತಾಲ್ಲೂಕಿನ ಹೊನ್ನಹಳ್ಳಿ ಬಸವಣ್ಣಕಟ್ಟೆ ಗ್ರಾಮದಲ್ಲಿ ನಡೆದಿದೆ. ಮೃತ ತಿಪ್ಪಣ್ಣ ಎಸ್ ನಂದವಾಡಗಿ(34) ನ ತಲೆ, ಸೊಂಟ, ತೊಡೆಯ ಭಾಗಕ್ಕೆ ಗಂಭೀರ ಗಾಯಗಳಾಗಿದೆ. ಪ್ರಕರಣ ಸಂಬಂಧ ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
