
ಚಳ್ಳಕೆರೆ : ಚಿತ್ರದುರ್ಗದ ಚಳ್ಳಕೆರೆ ನಗರದ ಬಾಪೂಜಿ ಬಾಲಕಿಯರ ಪ್ರೌಢ ಶಾಲಾ ಆವರಣದಲ್ಲಿ ವಕೀಲರ ಸಂಘದಿಂದ ಕಾನೂನು ಸೇವಾ ಸಮಿತಿ ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘’ವಿಶ್ವ ಮಾನವ ಹಕ್ಕುಗಳ ದಿನ’’ಕಾರ್ಯಕ್ರಮದ ಆಯೋಜಿಸಿದ್ದು, ಹಿರಿಯ ನ್ಯಾ.ಶಮೀರ್ ಪಿ. ನಂದ್ಯಾಳ್ರವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ಜನರಿಗೆ ಕಾನೂನಿನ ಅರಿವಿಲ್ಲದಾಗ ನ್ಯಾಯಾಲಯಗಳ ಮೊರೆ ಹೋಗುತ್ತಾರೆ, ಜನರಿಗೆ ಕಾನೂನಿನ ಅರಿವು ಮೂಡಿಸುವುದು ಕಾನೂನು ಸಲಹಾ ಸಮಿತಿಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ನ್ಯಾಯಾಲಯದಲ್ಲಿ ತನ್ನ ಕೆಲಸ ಮಾಡುತ್ತಿದೆ. ಮಕ್ಕಳಿಗೆ ಬಾಲ್ಯ ವಿವಾಹ ಫೋಕ್ಸೊ ಕಾಯ್ದೆ ಸೇರಿದಂತೆ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಿ, 210 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಸಂತಸದ ವಿಷಯ. ಸಂವಿಧಾನದ ಅಡಿಯಲ್ಲಿ ಬರುವ ಮೂಲಭೂತ ಹಕ್ಕುಗಳನ್ನು ಪಡೆದಿರುವ ನಾವು ಮತ್ತು ನಮಗೂ ಮೂಲಭೂತ ಕರ್ತವ್ಯಗಳನ್ನು ನೀಡಿದೆ. ದೇಶದ ಸೇವೆಗಾಗಿ ಮಹತ್ವದ ಜವಾಬ್ದಾರಿಯುತ ಕರ್ತವ್ಯಗಳನ್ನು ನಿರ್ವಹಿಸಬೇಕಾಗಿರುವುದು ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದು ತಿಳಿಸಿದರು.
