ಕೊಡಗು : ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿಂದನೆ ಮಾಡಲಾಗುತ್ತಿದೆ. ನಿಂದನೆ ಮಾಡಿದವರ ವಿರುದ್ಧ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಮಡಿಕೇರಿಯ ಇಂದಿರಾ ವೃತ್ತದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
