
ಬಾಗಲಕೋಟೆ : ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯ ಮುಧೋಳ ತಾಲ್ಲೂಕಿನ ಲೋಕಾಪುರ ದ ಹೊರವಲಯದಲ್ಲಿ ಘಟನೆ. ಟಿಪ್ಪರ್ ವಾಹನ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಬೈಕ್ ಸವಾರ ಮುಂಭಾಗದಲ್ಲಿದ್ದ ವೇಳೆ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪ್ರವೀಣ್(34) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಲೊಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
