Devanahalli ಅಂಬೇಡ್ಕರ್ ರವರ ಪುತ್ಥಳಿ ಲೋಕಾರ್ಪಣೆ
ದೇವನಹಳ್ಳಿ, ಜುಲೈ 13: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರವನ್ನ ಅರ್ಥಪೂರ್ಣವಾಗಿ ಆಚರಿಸಲಾಗಿಯಿತು. ಕರ್ನಾಟಕ ರಾಜ್ಯ ಡಾ.ಬಿ.ಆರ್.ಅಂಬೇಡ್ಕರ್ ರಕ್ಷಣಾ ಸಮಿತಿಯ ಸಂಸ್ಥಾಪಕರಾದ ಸಿ.ಶ್ರೀನಿವಾಸ್, ವಿಜಯಪುರ ಯುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಭಾನುಚಂದ್ರ ನೇತೃತ್ವದಲ್ಲಿ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.
ವಿಜಯಪುರ ಪಟ್ಟಣದ ಮುಖ್ಯ ರಸ್ತೆಯಲ್ಲಿ ರಾಲಿ ನಡೆಸಿ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಅಂಬೇಡ್ಕರ್ ಅಭಿಮಾನಿಗಳು, ಸಾರ್ವಜನಿಕರು ಪಟಾಕಿ ಸಿಡಿಸಿ, ಜೈಕಾರಗಳನ್ನ ಕೂಗಿ ಅಂಬೇಡ್ಕರ್ ಅವರನ್ನ ಸ್ಮರಿಸಿದರು. ಅಂಬೇಡ್ಕರ್ ಅವರ ಚಿಂತನೆ ಪ್ರತಿಯೊಬ್ಬರ ಏಳಿಗೆಯನ್ನು ಪ್ರೋತ್ಸಾಹಿಸುವಂತದ್ದು, ಅವರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳುವಂತೆ ಮುಖಂಡರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಸಮಾಜದ ಬಂಧುಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಇನ್ನು ಕಾರ್ಯಕ್ರಮದಲ್ಲಿ ವಿಜಯಪುರ ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್, ವಿವಿಧ ದಲಿತ ಸಂಘಟನೆಗಳ ಮುಖಂಡರು, ಸಾರ್ವಜನಿಕರು, ಸ್ಥಳೀಯರು ಭಾಗವಹಿಸಿದ್ದರು.
