Vachanananda Swamiji: ಪೋಕ್ಸೋ ಪ್ರಕರಣದಲ್ಲಿ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ದಾವಣಗೆರೆ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಹೈಕೋರ್ಟ್ ಸೂಚನೆ ಬೆನ್ನಲ್ಲೇ ಶ್ರೀಗಳು ರೆಗ್ಯುಲರ್ ಬೇಲ್ ಪಡೆದುಕೊಂಡಿದ್ದಾರೆ. ಇದರಿಂದಾಗಿ ವಚನಾನಂದ ಸ್ವಾಮೀಜಿಗೆ ಕೊಂಚ ರಿಲೀಫ್ ಸಿಕ್ಕಿದಂತಾಗಿದೆ. ವಚನಾನಂದ ಶ್ರೀ ವಿರುದ್ಧ 7 ಮಕ್ಕಳುಗಳಿಂದ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಸ್ವಾಮೀಜಿ ತಮ್ಮ ಮಠದಲ್ಲಿ ಮಕ್ಕಳನ್ನು ಸ್ನಾನದ ಕೋಣೆ ಹಾಗೂ ಮಲಗುವ ರೂಂಗೆ ಕರೆದು ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿದ್ದಾರೆ.
ಪೋಕ್ಸೋ ಕೇಸ್: ವಚನಾನಂದ ಶ್ರೀಗೆ ಜಾಮೀನು ಮಂಜೂರು

ಪ್ರಮುಖಾಂಶಗಳು:-
- ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ರಿಲೀಫ್
ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್ನಿಂದ ಬೇಲ್
ವಚನಾನಂದ ಶ್ರೀಗಳಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶ
ವಿಶೇಷ ಕೋರ್ಟ್ ನ್ಯಾ. ಶ್ರೀರಾಮ ನಾರಾಯಣ ಹೆಗಡೆ ಆದೇಶ
ದಾವಣಗೆರೆ, ಜುಲೈ 13: ಪೋಕ್ಸೋ ಪ್ರಕರಣದಲ್ಲಿ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ಜಾಮೀನು ದೊರಕಿದ್ದು, ಕೊಂಚ ರಿಲೀಫ್ ಸಿಕ್ಕಿದಂತಾಗಿದೆ. ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್ನ ನ್ಯಾ. ಶ್ರೀರಾಮ ನಾರಾಯಣ ಹೆಗಡೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ರದ್ದು ಮಾಡಿ ರೆಗ್ಯುಲರ್ ಬೇಲ್ ಪಡೆಯುವಂತೆ ಜೂ.25ರಂದು ಸ್ವಾಮೀಜಿಗೆ ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆ ಜೂನ್ 27ರಂದು ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್ಗೆ ವಚನಾನಂದ ಶ್ರೀಗಳು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಸ್ವಾಮೀಜಿಗೆ ರೆಗ್ಯುಲರ್ ಬೇಲ್ ಮಂಜೂರು ಮಾಡಿದೆ.
ಈಗಾಗಲೇ ವಚನಾನಂದ ಶ್ರೀ ವಿರುದ್ಧ 7 ಮಕ್ಕಳ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದ್ದು, ಮಕ್ಕಳನ್ನು ಸ್ನಾನದ ಕೋಣೆ ಹಾಗೂ ಮಲಗುವ ರೂಂಗೆ ಕರೆದು ಲೈಂಗಿಕ ಕಿರುಕುಳ ನೀಡಿರುವ ಆರೋಪ ಸ್ವಾಮೀಜಿ ಮೇಲಿದೆ. ಸಂತ್ರಸ್ತರ ಪರ ವಕೀಲ ರಮೇಶ್ ಕಲಾಲ್ ಮತ್ತು ವಚನಾನಂದಶ್ರೀ ಪರ ವಕೀಲ ಎಸ್.ವಿ.ಪಾಟೀಲ್ ವಾದ ಮಂಡನೆ ಮಾಡಿದ್ದರು.
ಪೋಕ್ಸೋ ಪ್ರಕರಣಕ್ಕೆ ರೀಕ್ಷಣಾ ಜಾಮೀನು ಪಡೆದಿದ್ದ ವಚನಾನಂದ ಸ್ವಾಮೀಜಿಗೆ ಹೈಕೋರ್ಟ್ ಈ ಹಿಂದೆ ಬಿಗ್ ಶಾಕ್ ಕೊಟ್ಟಿತ್ತು. ಪ್ರಕರಣ ದಾಖಲಾಗುವ ಮುನ್ನವೇ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆದಿದ್ದನ್ನು ಪ್ರಶ್ನಿಸಿ ಬಾಲಕನ ತಾಯಿ ಹೈಕೋರ್ಟ್ ಮೆಟ್ಟಿಲೇರಿದ್ದರು.ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಕೇಸ್ ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ನೀಡಿದ್ದು ಸರಿಯಾದ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಅಲ್ಲದೆ ಶ್ರೀಗಳ ನಿರೀಕ್ಷಣಾ ಜಾಮೀನು ರದ್ದುಪಡಿಸಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿತ್ತು. ಹೀಗಿದ್ದರೂ ರೆಗ್ಯುಲರ್ ಬೇಲ್ಗೆ ಅರ್ಜಿ ಸಲ್ಲಿಸಲು ಸ್ವಾಮೀಜಿಗೆ 3 ವಾರಗಳ ಕಾಲಾವಕಾಶ ನೀಡಿ, ಅಲ್ಲಿಯವರೆಗೂ ನಿರೀಕ್ಷಣಾ ಜಾಮೀನಿನ ರಕ್ಷಣೆ ಮುಂದುವರಿಕೆಗೆ ಕೋರ್ಟ್ ಸೂಚಿಸಿತ್ತು.
