ವಿಜಯಲಕ್ಷ್ಮೀ ದರ್ಶನ್ (Vijayalakshmi Darshan) ಅವರು ಗಂಡನೊಂದಿಗಿನ ಫೋಟೋವನ್ನು ಇನ್ಸ್ಟಾಗ್ರಾಮ್ ಸ್ಟೋರಿ (Instagram Story) ಹಾಕಿಕೊಂಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ವಿಜಯಲಕ್ಷ್ಮೀ ಅವರು ಆಗಾಗ ಫೋಟೋ, ವಿಡಿಯೋ ಶೇರ್ ಮಾಡುತ್ತಲೇ ಇರುತ್ತಾರೆ. ಇದೀಗ ವಿಜಯಲಕ್ಷ್ಮೀ ಅವರು ದರ್ಶನ್ ಜೊತೆಗಿರುವ ಫೋಟೋ ಪೋಸ್ಟ್ ಮಾಡಿದ್ದು ಅದರಲ್ಲಿ ಒಂದು ಬರಹವನ್ನು ಬರೆದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅವರ ಬಗ್ಗೆ ಆಗಾಗ ಅವರ ಪತ್ನಿ ಪೋಸ್ಟ್ ಹಾಕುತ್ತಿರುತ್ತಾರೆ. ಇದೀಗ ಸ್ಟೋರಿಯಲ್ಲಿ ಅವರು ಫೋಟೋ ಹಾಕಿದ್ದಾರೆ. ದರ್ಶನ್ ಜೊತೆಗಿನ ಎಐ ಫೋಟೋ ಶೇರ್ ಮಾಡಿದ ವಿಜಯಲಕ್ಷ್ಮಿ ಅವರು ಸುಂದರವಾದ ಕ್ಯಾಪ್ಶನ್ ಬರೆದಿದ್ದಾರೆ. ನಗುತಿರುವ ಮುಖದ ಹಿಂದಿನ ನೋವು ಭಗವಂತನಿಗೆ ಮಾತ್ರ ಗೊತ್ತು ಎಂದು ವಿಜಯಲಕ್ಷ್ಮೀ ಅವರು ಬರೆದುಕೊಂಡಿದ್ದಾರೆ. ವಿಜಯಲಕ್ಷ್ಮೀ ಅವರು ಆಗಾಗ ಗಂಡನ ನೆನಪಿನಲ್ಲಿ ಪೋಸ್ಟ್ ಮಾಡುತ್ತಲೇ ಇರುತ್ತಾರೆ. ಹಳೆಯ ಫೋಟೋಸ್, ವಿಡಿಯೋಸ್ ಆಗಾಗ ಅಭಿಮಾನಿಗಳಿಗಾಗಿ ಶೇರ್ ಮಾಡುತ್ತಾರೆ.
