
ನವದೆಹಲಿ, ಜು. 21: ಮಂಗಳವಾರ ಪ್ರಶ್ನೋತ್ತರ ವೇಳೆಯೊಂದಿಗೆ ಆರಂಭವಾದ ಲೋಕಸಭೆ ಕಲಾಪದಲ್ಲಿ ನೀಟ್ (NEET) ಪರೀಕ್ಷಾ ಅಕ್ರಮಗಳ ಕುರಿತು ಚರ್ಚೆ ನಡೆಸುವಂತೆ ಪ್ರತಿಪಕ್ಷ ಸದಸ್ಯರು ಒತ್ತಾಯಿಸಿದರು. ಈ ವೇಳೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಸದನದಲ್ಲಿ ಗದ್ದಲ ನಡೆಸಿದ ಹಿನ್ನೆಲೆಯಲ್ಲಿ, ಲೋಕಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಯಿತು.
