Bhadra plan give grants: ಭದ್ರಾ ಮೇಲ್ದಂಡೆ ಯೋಜನೆಯ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಯಾದವರೆಡ್ಡಿ ಆಗ್ರಹಿಸಿದರು.ಭದ್ರಾ ಮೇಲ್ದಂಡೆ ಯೋಜನೆ ಕುರಿತು ಲೋಕಸಭೆಯಲ್ಲಿ ಕೋದಂಡರಾಮಯ್ಯ ಹಾಗೂ ವಿಧಾನಸಭೆಯಲ್ಲಿ ಟಿ.ರಘುಮೂರ್ತಿ ಹೊರತುಪಡಿಸಿ ಯಾರು ಮಾತನಾಡಿಲ್ಲ. ರಾಜ್ಯ ಸರ್ಕಾರ ಭದ್ರ ಮೇಲ್ದಂಡೆ ಯೋಜನೆಗೆ ಕಳೆದ 2 ವರ್ಷಗಳಿಂದ ಯಾವುದೇ ಹಣ ಬಿಡುಗಡೆ ಮಾಡಿಲ್ಲ. 100 ಕೋಟಿ ಹಣ ಬಿಡುಗಡೆ ಮಾಡಿದ್ದೇವೆ ಎಂದು ಸುಳ್ಳು ಹೇಳುತ್ತಿದೆ ಎಂದು ಕಿಡಿಕಾರಿದರು.
ಚಿತ್ರದುರ್ಗ, ಜು.22: ಭದ್ರಾ ಮೇಲ್ದಂಡೆ ಯೋಜನೆಯ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಯಾದವರೆಡ್ಡಿ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಂಸದ ಗೋವಿಂದ ಕಾರಜೋಳ ಸೇರಿದಂತೆ ರಾಜ್ಯದ 27 ಸಂಸದರು ಭದ್ರಾ ಮೇಲ್ದಂಡೆ ಯೋಜನೆ ಕುರಿತು ಸಂಸತ್ತಿನಲ್ಲಿ ಮಂಡಿಸದೆ ನಿರ್ಲಕ್ಷ ವಹಿಸಿದ್ದಾರೆ ಎಂದು ಆರೋಪಿಸಿದರು. ಸಂಸದ ಗೋವಿಂದ ಕಾರಜೋಳ ಈ ಬಾರಿ ನಾನು 5300 ಕೋಟಿ ಭದ್ರ ಮೇಲ್ದಂಡೆ ಯೋಜನೆಗೆ ತರದಿದ್ದರೆ ನಿಮ್ಮ ಜೊತೆ ಹೋರಾಟ ಮಾಡುತ್ತೇನೆ ಎಂದಿದ್ದ ಅವರು ಈಗ ಮೌನವಾಗಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆ ಕುರಿತು ಲೋಕಸಭೆಯಲ್ಲಿ ಕೋದಂಡರಾಮಯ್ಯ ಹಾಗೂ ವಿಧಾನಸಭೆಯಲ್ಲಿ ಟಿ.ರಘುಮೂರ್ತಿ ಹೊರತುಪಡಿಸಿ ಯಾರು ಮಾತನಾಡಿಲ್ಲ. ರಾಜ್ಯ ಸರ್ಕಾರ ಭದ್ರ ಮೇಲ್ದಂಡೆ ಯೋಜನೆಗೆ ಕಳೆದ 2 ವರ್ಷಗಳಿಂದ ಯಾವುದೇ ಹಣ ಬಿಡುಗಡೆ ಮಾಡಿಲ್ಲ. 100 ಕೋಟಿ ಹಣ ಬಿಡುಗಡೆ ಮಾಡಿದ್ದೇವೆ ಎಂದು ಸುಳ್ಳು ಹೇಳುತ್ತಿದೆ ಎಂದು ಕಿಡಿಕಾರಿದರು.
ರಾಜ್ಯ ಸರ್ಕಾರ ಯುವ ನಿಧಿ ಸೇರಿದಂತೆ ವಿವಿಧ ಯೋಜನೆಗಳಿಗೆ ಹಣ ನೀಡುತ್ತಿದ್ದು, ಭದ್ರಾ ಮೇಲ್ದಂಡೆ ಯೋಜನೆಗೂ ವಿಶೇಷ ಪ್ಯಾಕ್ ಘೋಷಿಸಿ ಕನಿಷ್ಠ ಮೂರು ಸಾವಿರ ಕೋಟಿ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಮುಖ್ಯಮಂತ್ರಿಗಳು ಇದೇ 25ನೇ ತಾರೀಕಿನಂದು ಚಿತ್ರದುರ್ಗಕ್ಕೆ ಬರುವ ಮುನ್ನವೇ ಗೋನೂರು ಕೆರೆಗೆ ನೀರು ಹರಿಸುವ ದಿನಾಂಕವನ್ನು ಘೋಷಿಸಿ ಬರಬೇಕು. ಜಿಲ್ಲೆಗೆ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಿ ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು . ದನ ಕರುಗಳಿಗೆ ಮೇವಿನ ಕೊರತೆಯನ್ನು ನೀಗಿಸಲು ಹಾಗೂ ಗುಳೆ ಹೋಗುವುದನ್ನು ತಪ್ಪಿಸಲು ಮೋಡ ಬಿತ್ತನೆ ಮಾಡಬೇಕು ಎಂದು ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಯಾದವರೆಡ್ಡಿ ಒತ್ತಾಯಿಸಿದರು.
