Cauvery Water Dispute: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಕೊನೆಗೂ ನ್ಯಾಯ ಸಿಕ್ಕಿದೆ. ನೀರು ಹಂಚಿಕೆ ವಿಚಾರವಾಗಿ ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳಲು ಪ್ರಾಧಿಕಾರವು ನಿರ್ದೇಶನ ನೀಡಿದೆ. ಈ ಮೂಲಕ ಕರ್ನಾಟಕಕ್ಕೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
ದೆಹಲಿ, ಜು.23: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಕೊನೆಗೂ ನ್ಯಾಯ ಸಿಕ್ಕಿದೆ. ನೀರು ಹಂಚಿಕೆ ವಿಚಾರವಾಗಿ ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳಲು ಪ್ರಾಧಿಕಾರವು ನಿರ್ದೇಶನ ನೀಡಿದೆ. ಈ ಮೂಲಕ ಕರ್ನಾಟಕಕ್ಕೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೊದಲಿನಿಂದಲೂ ಕ್ಯಾತೆ ತಗೆಯುವುದನ್ನು ಮುಂದುವರಿಸಿದೆ. ಇದೀಗ ಕರ್ನಾಟಕದಲ್ಲಿ ಮಳೆ ಕೊರತೆ ಹಾಗೂ ರೈತರಿಗೆ ಸಂಕಷ್ಟ ಎದುರಾದರೂ ಸಹ ನಮಗೆ ಹರಿಸಬೇಕಾದ ನೀರನ್ನು ಬಿಡಿ ಎಂದು ತಮಿಳುನಾಡು ಸರ್ಕಾರ ಒತ್ತಾಯಿಸಿದೆ. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಮಹತ್ವದ ಆದೇಶ ಮಾಡಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಶಾಕ್ ನೀಡಿದೆ.
ಮಾನ್ಸೂನ್ ಮುಂಗಾರಿನಲ್ಲಿ ಉತ್ತಮ ಮಳೆಯಾಗಿಲ್ಲ. ಆದರೆ ಈ ರೀತಿ ಇರುವಾಗಲೇ ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕು ಎಂದು ತಮಿಳುನಾಡು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮೊರೆ ಹೋಗಿತ್ತು. ಇದೀಗ ಈ ವಿಚಾರದಲ್ಲಿ ಕೊನೆಗೂ ತಮಿಳುನಾಡು ಸರ್ಕಾರಕ್ಕೆ ಹಿನ್ನಡೆ ಆಗಿದೆ. ಕರ್ನಾಟಕಕ್ಕೆ ಸಮಾಧಾನಕರ ತೀರ್ಪು ಪ್ರಕಟವಾಗಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಮಹತ್ವದ ತೀರ್ಪು ನೀಡಲಾಗಿದೆ.
ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಬರದ ಛಾಯೆ ಆವರಿಸಿದೆ. ಈ ರೀತಿ ಇದ್ದರೂ ಕರ್ನಾಟಕದಿಂದ ನೀರು ಬಿಡುತ್ತಿಲ್ಲ ಎಂದು ತಮಿಳುನಾಡು ಆರೋಪಿಸಿತ್ತು. ಇದೀಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಈಗ ಇರುವ ಕಾವೇರಿ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಬೇಕು. ನೀರಿನ ಕೊರತೆ ಎದುರಾಗುವುದನ್ನು ತಪ್ಪಿಸುವ ಉದ್ದೇಶದಿಂದ ಕೃಷಿ ಮತ್ತು ನೀರಾವರಿ ಉದ್ದೇಶಗಳಿಗೆ ಕಾವೇರಿ ನೀರನ್ನು ಬಳಸಬಾರದು ಎಂದು ಕರ್ನಾಟಕ ಮತ್ತು ತಮಿಳುನಾಡಿಗೆ ಎರಡೂ ರಾಜ್ಯಗಳಿಗೂ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದೆ.
ಕರ್ನಾಟಕ ಸರ್ಕಾರವು ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸೂಚನೆ ನೀಡಿದೆ. ನೀರು ಹಂಚಿಕೆ ವಿಚಾರವಾಗಿ ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳಲು ಪ್ರಾಧಿಕಾರವು ನಿರ್ದೇಶನ ನೀಡಿದೆ. ಈ ಮೂಲಕ ಕರ್ನಾಟಕಕ್ಕೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಜು. 23ರ ಬುಧವಾರ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ ನಡೆದಿತ್ತು. ಈ ಸಭೆಯಲ್ಲಿ ಕರ್ನಾಟಕವು 28 ಟಿಎಂಸಿ ನೀರು ಬಿಡುವ ಬದಲು ಕೇವಲ 3.4 ಟಿಎಂಸಿ ನೀರು ಬಿಡುತ್ತಿದೆ ಎಂದು ತಮಿಳುನಾಡು ದೂರಿತ್ತು. ಅದಕ್ಕೆ ಈ ಸಲ ಕರ್ನಾಟಕದಲ್ಲಿ ಭಾರೀ ಬರಗಾಲ ಇದೆ ಎಂಬುದನ್ನು ಮನವರಿಕೆ ಮಾಡಿಕೊಡಲಾಯಿತು. ಕರ್ನಾಟಕದ ಪರಿಸ್ಥಿತಿಯನ್ನು ಮನಗಂಡ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ನಿರ್ದೇಶನ ನೀಡಿದೆ. ಇದು ಕರ್ನಾಟಕಕ್ಕೆ ಸದ್ಯದ ಮಟ್ಟಿಗೆ ರಿಲೀಫ್ ಕೊಟ್ಟಂಗೆ ಆಗಿದೆ.
