ODI World Cup 2027: 2027ರ ಅಕ್ಟೋಬರ್ 4 ರಿಂದ ನವೆಂಬರ್ 21 ರವರೆಗೆ ನಡೆಯಲಿರುವ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಟೂರ್ನಿಗೆ ಟೀಮ್ ಇಂಡಿಯಾ ಆಟಗಾರರ ಹೆಸರು ಪ್ರಕಟಿಸಿಲಾಗಿದೆ. ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಗೆ ಭಾರತ ತಂಡ ಹೇಗಿರಬೇಕೆಂದು ಟೀಮ್ ಇಂಡಿಯಾ ಲೆಜೆಂಡ್ ಸುನಿಲ್ ಗವಾಸ್ಕರ್ ತಿಳಿಸಿದ್ದಾರೆ.
2027ರ ಐಸಿಸಿ ಪುರುಷರ ಏಕದಿನ ವಿಶ್ವಕಪ್ಗಾಗಿ ಟೀಮ್ ಇಂಡಿಯಾದ ಮಾಜಿ ದಿಗ್ಗಜ ಸುನಿಲ್ ಗಾವಸ್ಕರ್ 15 ಸದಸ್ಯರ ಬಲಿಷ್ಠ ತಂಡವನ್ನು ಹೆಸರಿಸಿದ್ದಾರೆ. ಈ ತಂಡದಲ್ಲಿ ಯುವ ಹಾಗೂ ಹಿರಿಯ ಆಟಗಾರರ ಸಮತೋಲನ ಕಂಡುಬಂದಿದೆ. ಆದರೆ, ಪ್ರಸ್ತುತ ಫಾರ್ಮ್ನಲ್ಲಿರುವ ಕೆಲವು ಸ್ಟಾರ್ ಆಟಗಾರರನ್ನು ಕೈಬಿಟ್ಟಿರುವುದು ಚರ್ಚೆಗೆ ಕಾರಣವಾಗಿದೆ.

ಗಿಲ್ಗೆ ನಾಯಕತ್ವ
ಸುನಿಲ್ ಗವಾಸ್ಕರ್ ತಮ್ಮ ತಂಡದ ಸಾರಥ್ಯವನ್ನು ಯುವ ಬ್ಯಾಟರ್ ಶುಭ್ಮನ್ ಗಿಲ್ ಹೆಗಲಿಗೆ ಹಾಕಿದ್ದಾರೆ. ಇನ್ನು 2027ರ ವೇಳೆಗೆ ವಯಸ್ಸಿನ ಕಾರಣದಿಂದಾಗಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ವಕಪ್ ಆಡುವುದು ಅನುಮಾನ ಎಂಬ ಕ್ರಿಕೆಟ್ ಪಂಡಿತರ ಲೆಕ್ಕಾಚಾರವನ್ನು ಗವಾಸ್ಕರ್ ತಳ್ಳಿಹಾಕಿದ್ದಾರೆ. ಆಫ್ರಿಕನ್ ಪಿಚ್ಗಳಲ್ಲಿ ಟೀಮ್ ಇಂಡಿಯಾ ಗೆಲ್ಲಬೇಕಾದರೆ ಈ ಇಬ್ಬರು ದಿಗ್ಗಜರ ಅನುಭವ ಅತಿ ಮುಖ್ಯ ಎಂದು ಗವಾಸ್ಕರ್ ಹೇಳಿದ್ದಾರೆ.
ಪಂತ್, ಜೈಸ್ವಾಲ್ ಮತ್ತು ಶಮಿಗೆ ಶಾಕ್:
ಪ್ರಸ್ತುತ ಮೂರೂ ಮಾದರಿಯ ಕ್ರಿಕೆಟ್ನಲ್ಲಿ ಅಬ್ಬರಿಸುತ್ತಿರುವ ಯುವ ಓಪನರ್ ಯಶಸ್ವಿ ಜೈಸ್ವಾಲ್ ಮತ್ತು ಮ್ಯಾಚ್ ವಿನ್ನರ್ ರಿಷಭ್ ಪಂತ್ ಅವರಿಗೆ ಗವಾಸ್ಕರ್ ತಂಡದಲ್ಲಿ ಸ್ಥಾನ ನೀಡಿಲ್ಲ. ಇದು ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಇವರ ಬದಲಿಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಕೆ.ಎಲ್. ರಾಹುಲ್ ಮತ್ತು ಇಶಾನ್ ಕಿಶನ್ಗೆ ನೀಡಿದ್ದಾರೆ. ಇನ್ನು ಹಿರಿಯ ವೇಗಿ ಮೊಹಮ್ಮದ್ ಶಮಿ ಮತ್ತು ಭುವನೇಶ್ವರ್ ಕುಮಾರ್ ಅವರ ಹೆಸರನ್ನೂ ಗವಾಸ್ಕರ್ ಕೈಬಿಟ್ಟಿದ್ದಾರೆ.
ವೇಗಿಗಳಿಗೆ ಮಣೆಹಾಕಿದ ಗವಾಸ್ಕರ್
ಸೌತ್ ಆಫ್ರಿಕಾದ ವೇಗದ ಪಿಚ್ಗಳನ್ನು ಗಮನದಲ್ಲಿಟ್ಟುಕೊಂಡು ಸುನಿಲ್ ಗವಾಸ್ಕರ್ ಅವರು ಯುವ ವೇಗಿ ಹರ್ಷಿತ್ ರಾಣಾ, ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರಿಗೆ ತಂಡದಲ್ಲಿ ಅವಕಾಶ ನೀಡಿದ್ದಾರೆ. ಹಾರ್ದಿಕ್ ಪಾಂಡ್ಯ ಜೊತೆಗೆ ನಿತೀಶ್ ರೆಡ್ಡಿ ತಂಡಕ್ಕೆ ಹೆಚ್ಚುವರಿ ಬೌಲಿಂಗ್ ಬಲ ತುಂಬಲಿದ್ದಾರೆ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.
